ಸಾಂಸ್ಕೃತಿಕ- ನೃತ್ಯ ಸ್ಪರ್ಧೆಗೆ ಚಾಲನೆ
ರಾಯಚೂರು: ನಗರದ ಮಾಣಿಕಪ್ರಭು ಅಂಧ ಮಕ್ಕಳ ಶಾಲೆಯಿಂದ ಇಲ್ಲಿನ ರಂಗಮಂದಿರದಲ್ಲಿ ಭಾನುವಾರ ನೃತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯ ಉದ್ಘಾಟನೆ ಸಮಾರಂಭ ಆಯೋಜಿಸಲಾಗಿತ್ತು.
ಸಮಾರಂಭವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಎಂ.ವಿ. ಸಾವಿತ್ರಿ ಮಾತನಾಡಿ, ಸರ್ಕಾರ ವಿಕಲಚೇಕತನರಿಗಾಗಿ ಅನೇಕ ಕಾರ್ಯಕ್ರಮ ರೂಪಿಸಿದ್ದು, ಅವುಗಳ ಸದುಪಯೋಗ ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಮನವಿ ಮಾಡಿದರು.
ವಿಕಲಚೇತನರು ಸಾಮಾನ್ಯರಿಗಿಂತ ಹೆಚ್ಚಿನ ಬುದ್ಧಿಮಟ್ಟದಿಂದ ವಿಶೇಷ ಎನಿಸುತ್ತಾರೆ. ದೃಢ ನಿರ್ಧಾರ ಮತ್ತು ಆತ್ಮ ವಿಶ್ವಾಸದಿಂದ ಮುನ್ನಡೆದು ಪ್ರತಿಭೆ ಪ್ರದರ್ಶನ ಮೂಲಕ ಈ ಸ್ಪರ್ಧೆಯಲ್ಲಿ ಸಾಧನೆ ಮೆರೆಯುವಂತೆ ಸಲಹೆ ನೀಡಿದರು. ಸಂಸದ ಸಣ್ಣ ಫಕೀರಪ್ಪ ಮಾತನಾಡಿದರು. ಸಮಾರಂಭದಲ್ಲಿ ಶಾಸಕ ಸೈಯದ್ ಯಾಸೀನ್, ಮಾಣಿಕಪ್ರಭು ಸಂಸ್ಥೆಯ ಅಧ್ಯಕ್ಷ ಆನಂದರಾಜ ಮಾಣಿಕಪ್ರಭು, ಕಿಶನ್ ಗೋಪಾಲ್ ಝಂವಾರ್, ವೀರಣ್ಣಗೌಡ, ಡಾ. ನಾಗರಾಜ ಭಾಲ್ಕಿ ಸೇರಿದಂತೆ ಅನೇಕರಿದ್ದರು. ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು.
--
ಡಿಸಿ ವರ್ಗಾವಣೆ ರದ್ದತಿಗೆ ಆಗ್ರಹಿಸಿ ಕರವೇ ಪ್ರತಿಭಟನೆ
ಲಿಂಗಸ್ಗೂರು: ರಾಯಚೂರು ಜಿಲ್ಲಾಧಿಕಾರಿಗಳ ವರ್ಗಾವಣೆ ಆದೇಶ ರದ್ದುಗೊಳಿಸಿ ಯಥಾಸ್ಥಿತಿ ಮುಂದುವರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು, ಕಳೆದ ವರ್ಷ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಎಂ.ವಿ. ಸಾವಿತ್ರಿ ಅವರು ಸರ್ಕಾರದ ಅನೇಕ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆ. ಇವರ ವರ್ಗಾವಣೆಯಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಳ್ಳಲಿವೆ.
ಸರ್ಕಾರ ದಿಢೀರ್ ವರ್ಗಾವಣೆ ಮಾಡಿರುವ ಆದೇಶವನ್ನು ಕೂಡಲೇ ಹಿಂಪಡೆದು ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು. ಇಲ್ಲದಿದ್ದರೆ ಕರವೇಯಿಂದ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಬರೆದ ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಕರವೇ ತಾಲೂಕಾಧ್ಯಕ್ಷ ಜಿಲಾನಿ ಪಾಶಾ, ಆಂಜನೇಯ ಭಂಡಾರಿ, ಶಿವರಾಜ ನಾಯಕ, ಚಂದ್ರು, ಯಲ್ಲಪ್ಪ ಬಂಡಿ, ಸದ್ದಾಂ ಹುಸೇನ, ಚಂದ್ರುನಾಯಕ, ಸಂದೀಪ, ಅಮರೇಶ, ರುದ್ರಯ್ಯಸ್ವಾಮಿ, ಕನಕ ಸೇರಿದಂತೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

