ರಾಯಚೂರು

ಪ್ರಸಕ್ತ ಬಜೆಟ್‌ಗೆ 1 ಲಕ್ಷ ಕೋಟಿ ಪ್ರಸ್ತಾವನೆ

Published On :

ರಾಯಚೂರು: ಹೈದರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗೆ ರಚಿಸಿರುವ ನಂಜುಂಡಪ್ಪ ವರದಿ ಅನುಷ್ಠಾನ ಉನ್ನತಾಧಿಕಾರ ಸಮಿತಿಗೆ ಪ್ರಸಕ್ತ ಬಜೆಟ್‌ನಲ್ಲಿ 1 ಲಕ್ಷ ಕೋಟಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ತ್ರಿವಿಕ್ರಮ್ ಜೋಷಿ ತಿಳಿಸಿದರು. ನಗರದಲ್ಲಿ ಮಂಗಳವಾರ ಐಎಂಎ ಹಾಲ್‌ನಲ್ಲಿ ಜಿಲ್ಲಾ ಸವಿತಾ ಸಮಾಜದಿಂದ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ರಾಜ್ಯದಲ್ಲಿ 31 ಅತ್ಯಂತ ಹಿಂದುಳಿದ ಹಾಗೂ 41 ಹಿಂದುಳಿದ ತಾಲೂಕುಗಳು ಸೇರಿದಂತೆ ಒಟ್ಟು 114 ತಾಲೂಕುಗಳು ಸಮಿತಿಯ ವ್ಯಾಪ್ತಿಗೆ ಬರುತ್ತವೆ. ಸಮಿತಿಯ ಅಡಿ 27 ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಯತ್ನ: ಹಿಂದುಳಿದ ವರ್ಗಗಳ ಸಮಿತಿಗಳನ್ನು ಎಲ್ಲ ಜಿಲ್ಲೆಗಳಲ್ಲಿ ರಚಿಸಲಾಗಿದೆ. ಪಕ್ಷ ಅಧಿಕಾರಕ್ಕೆ ಬಂದ ನಂತರ ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದೆ. ಹಿಂದುಳಿದವರ ಸಮುದಾಯಕ್ಕೆ ಗುರುತಿಸಿ ಸರ್ಕಾರ ಉನ್ನತ ಹುದ್ದೆಗಳನ್ನು ನೀಡಿದೆ ಎಂದುಹೇಳಿದರು.
ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಶೋಕ ಗಸ್ತಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ಹಿಂದುಳಿದ ವರ್ಗಗಳಿಗೆ ಮುಂದಿನ ದಿನಗಳಲ್ಲಿ ಕೈಗೊಳ್ಳಲಾಗುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ನಿಗಮ ಸ್ಥಾನ ಸಿಕ್ಕಿದ್ದಕ್ಕೆ ಸಂತಸ: ಮಾಜಿ ಶಾಸಕ ಪಾಪಾರೆಡ್ಡಿ ಮಾತನಾಡಿ, ಪಕ್ಷದ ಪ್ರಾಮಾಣಿಕ ಕಾರ್ಯಕರ್ತರಾಗಿ ದುಡಿದ ಅಶೋಕ ಗಸ್ತಿಯವರನ್ನು ಗುರುತಿಸಿದ ಸರ್ಕಾರ ನಿಗಮದ ಅಧ್ಯಕ್ಷ ಸ್ಥಾನ ನೀಡಿದೆ.
  ಗಸ್ತಿ ಅವರು ಎಂದಿಗೂ ಅಧಿಕಾರಕ್ಕೆ ಆಸೆ ಪಟ್ಟವರಲ್ಲ. ಅಂಥವರಿಗೆ ನಿಗಮ ಸ್ಥಾನ ನೀಡಿದ್ದು ಸಂತಸ ತಂದಿದೆ ಎಂದು ಹೇಳಿದರು.
ಎಪಿಎಂಸಿ ಅಧ್ಯಕ್ಷ ಆರ್.ತಿಮ್ಮಯ್ಯ ಮಾತನಾಡಿ, ಪಕ್ಷಕ್ಕಾಗಿ ದುಡಿದವರನ್ನು ಗುರುತಿಸಿ ಪಕ್ಷ ನಿಗಮದ ಅಧ್ಯಕ್ಷರಾಗಿಸಿ ಗೌರವಿಸಿದ್ದು, ಪಕ್ಷದ ಮುಂದಿನ ಚುನಾವಣೆಯ ಅಭ್ಯರ್ಥಿ ಪಾಪಾರೆಡ್ಡಿ ಅವರ ಗೆಲವಿಗೆ ಎಲ್ಲರೂ ಶ್ರಮಿಸುವಂತೆ ಮನವಿ ಮಾಡಿದರು.
ಸನ್ಮಾನ: ಜಿಲ್ಲಾ ಸವಿತಾ ಸಮಾಜದಿಂದ ಸಮಾರಂಭದಲ್ಲಿ ಅಶೋಕ ಗಸ್ತಿ ಮತ್ತು ತ್ರಿವಿಕ್ರಮ್ ಜೋಷಿ ಅವರನ್ನು ಸನ್ಮಾನಿಸಲಾಯಿತು.
 ಸವಿತಾ ಸಮಾಜದ ರಾಜ್ಯಾಧ್ಯಕ್ಷ ಎನ್.ಸಂಪತಕುಮಾರ್, ನಗರಾಧ್ಯಕ್ಷ ಗೋವಿಂದ, ಬಿಜೆಪಿ ಜಿಲ್ಲಾಧ್ಯಕ್ಷ ಅಮರೇಶ್ ಹೊಸಮನಿ, ನಗರಸಭೆಯ ಮಾಜಿ ಉಪಾಧ್ಯಕ್ಷ ದೊಡ್ಡಮಲ್ಲೇಶ್, ನಗರಸಬೆ ಸದಸ್ಯ ಶ್ರೀನಿವಾಸರೆಡ್ಡಿ, ರಮಾನಂದ ಯಾದವ್, ಇಡಪನೂರು ಆಂಜಿನೇಯ, ನೀಲಕಂಠರಾವ್ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.