ರಾಯಚೂರು

ಆಕಸ್ಮಿಕ ಬೆಂಕಿ: ಗೃಹಿಣಿ ಸಾವು

Published On :

ರಾಯಚೂರು: ಲಿಂಗಸ್ಗೂರು ತಾಲೂಕಿನ ಕೋಟಾ ಗ್ರಾಮದಲ್ಲಿ ಅಡುಗೆ ಮಾಡುತ್ತಿದ್ದ ವೇಳೆ ಆಕಸ್ಮಿಕ ಬೆಂಕಿ ತಗುಲಿ ಗೃಹಿಣಿಯೊಬ್ಬರು ಸಾವಿಗೀಡಾಗಿದ್ದಾರೆ.
ಮೃತರನ್ನು ಮಂಜುಳಾ(32) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ಅಡುಗೆ ಮಾಡಲು ಗ್ಯಾಸ್ ಸ್ಟೋವ್ ಹೊತ್ತಿಸುವ ವೇಳೆ ಆಕಸ್ಮಿಕ ಬೆಂಕಿ ಹೊತ್ತಿ ಸುಟ್ಟ ಗಾಯಗಳಿಂದಾಗಿ ಸಾವಿಗೀಡಾಗಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಹಟ್ಟಿ  ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಉತ್ತಮ ಫಲಿತಾಂಶ
ರಾಯಚೂರು: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಯುವಕ- ಯುವತಿಯರು ರಾಷ್ಟ್ರೀಯ ಸ್ವಯಂ ಸೇವಕರಾಗಿ ಕೆಲಸ ಮಾಡಲು ನೆಹರು ಯುವ ಕೇಂದ್ರದಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಮಾನ್ಯ ವರ್ಗದವರಿಗೆ 18ರಿಂದ 24 ವಯೋವುತಿಯವರಾಗಿದ್ದು, ಎಸ್ಸೆಸ್ಸೆಲ್ಸಿ ಪಾಸಾಗಿದ್ದು, ಕಂಪ್ಯೂಟರ್ ಜ್ಞಾನ ಅವಶ್ಯ.
 ಪೂರ್ಣಾವಧಿ ಕೆಲಸವಾಗಿದ್ದು, ಕಾಲೇಜುಗಳಲ್ಲಿ ವ್ಯಾಸಂಗದಲ್ಲಿರುವವರು ಅರ್ಜಿ ಸಲ್ಲಿಸಲು ಅನರ್ಹರು. ಗೌರವಧನ ಹಾಗೂ ಇತರೆ ಮಾಹಿತಿಗಾಗಿ ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿಗಳನ್ನು ಭೇಟಿಯಾಗಬಹುದು.  ಅರ್ಜಿ ಸಲ್ಲಿಸಲು ಫೆ.15 ಕಡೆಯ ದಿನ. ಹೆಚ್ಚಿನ ಮಾಹಿತಿಗೆ ದೂ. 08532- 230240   ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.