ರಾಯಚೂರು

ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹ

Published On :

ಲಿಂಗಸ್ಗೂರು: ಉಡುಪಿ ಜಿಲ್ಲಾ ವರದಿಗಾರ ಶ್ರೀಪತಿ ಹೆಗಡೆ ಹೆಕ್ಲಾಡಿ ಅವರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಕೂಡಲೆ ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಬುಧವಾರ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಉಡುಪಿ ಜಿಲ್ಲೆಯ ಕುಂದಾಪೂರ ತಾಲೂಕಿನ ವಂಡ್ಸೆ ಗ್ರಾಪನಲ್ಲಿ ದಲಿತ ಮಹಿಳೆಗೆ ಅಧ್ಯಕ್ಷ ಸ್ಥಾನ ತಪ್ಪಿಸಿದ ಕುರಿತು ವರದಿ ಮಾಡಿದ ಜಿಲ್ಲಾ ವರದಿಗಾರ ಶ್ರೀಪತಿ ಹೆಗಡೆ ಹೆಕ್ಲಾಡಿ ಅವರ ಮೇಲೆ ಕೆಲ ದುಷ್ಕರ್ಮಿಗಳು ಹಲ್ಲೆ ಮಾಡಿದ್ದು, ಪತ್ರಿಕೆ ಕಾರ್ಯಾಲಯಕ್ಕೆ ಬೆದರಿಕೆ ಕರೆ ಮಾಡಿರುವುದು ಅವಿವೇಕತನದ ಪರಮಾವಧಿಯಾಗಿದೆ. ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುವ ಪತ್ರಿಕೆಗಳ ಸ್ವಾಭಿಮಾನಕ್ಕೆ ಧಕ್ಕೆ ಉಂಟು ಮಾಡುವ ದುಷ್ಕೃತ್ಯಗಳು ನಡೆಯುತ್ತಿವೆ.
ಕ್ರಮ ಕೈಗೊಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ನ್ಯಾಯ ಸಿಗದಂತಾಗಿದೆ. ಸರ್ಕಾರ ಪತ್ರಕರ್ತರ ರಕ್ಷಣೆ ಮತ್ತು ಅವರ ಮೇಲಾಗುತ್ತಿರುವ ಹಲ್ಲೆಗೆ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ. ಇದರಿಂದ ಪತ್ರಕರ್ತರ ಮೇಲೆ ಪ್ರಕರಣಗಳು ಮರುಕಳಿಸುತ್ತಿವೆ.
ಪತ್ರಕರ್ತರ ಮೇಲಾಗುತ್ತಿರುವ ಹಲ್ಲೆ ತಡೆಯಲು ರಚನೆಯಾದ ದೌರ್ಜನ್ಯ ತಡೆ ಸಮಿತಿ ತಾಲೂಕು ಮಟ್ಟದಲ್ಲಿ ರಚನೆ ಮಾಡಬೇಕು. ಉಡುಪಿ ಜಿಲ್ಲಾ ವರದಿಗಾರ ಶ್ರೀಪತಿ ಹೆಕ್ಲಾಡಿ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ನ್ಯಾಯ ಒದಗಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ದಸಂಸ ಸಂಘಟನಾ ಸಂಚಾಲಕ ಮರಿಯಪ್ಪ ಕಳ್ಳಿಲಿಂಗಸ್ಗೂರು, ತಾಲೂಕು ಸಂಚಾಲಕರಾದ ಚನ್ನಬಸವ ಕುಣಿಕಲ್ಲೂರ, ಹುಲಗಪ್ಪ ಕೆಸರಟ್ಟಿ, ಗ್ಯಾನಪ್ಪ ಆದಿಮನಿ, ಪ್ರೇಮಜೀವಿ ಗೊರೇಬಾಳ, ಚಂದ್ರಶೇಖರ ಗೊರೇಬಾಳ, ಯಂಕಪ್ಪ ಚಿತಾಪೂರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.