ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳು: ತಾಪಂ ಅಧ್ಯಕ್ಷರ ತರಾಟೆ
ದೇವದುರ್ಗ: ಅಧಿಕಾರಿಗಳು ತಾಲೂಕಿನ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳುವುದು ಅವಶ್ಯಕ. ನೆಪ ಹೇಳುತ್ತಲೆ ಕಾಲಹರಣ ಮಾಡುವುದನ್ನು ಸಹಿಸಲಾಗದು ಎಂದು ತಾಪಂ ಅಧ್ಯಕ್ಷ ಪ್ರಭಯ್ಯ ಸ್ವಾಮಿ ಅವರು ಅಧಿಕಾರಿಗಳಿಗೆ ಎಚ್ಚರಿಸಿದರು.
ಈಚೆಗೆ ಇಲ್ಲಿನ ತಾಪಂನಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಜನರಿಗೆ ಕುಡಿವ ನೀರಿನ ತೊಂದರೆಯಾಗಿದೆ. ಅದರ ನಿವಾರಣೆಗೆ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡದೇ ಪರಸ್ಪರರ ಮೇಲೆ ದೋಷ ಹೊರಿಸುತ್ತಿರುವುದು ಸರಿಯಲ್ಲ ಎಂದರು.
ಸಭೆಯಲ್ಲಿ ಮಾತನಾಡಿದ ಅನೇಕ ಸದಸ್ಯರು ತಾಪಂ ಸಭೆಗಳಿಗೆ ನಿರ್ಮಿತಿ ಕೇಂದ್ರ ಮತ್ತು ಭೂಸೇನಾ ನಿಗಮದ ಅಧಿಕಾರಿಗಳು ಆಗಮಿಸುವುದಿಲ್ಲ ಎಂದು ದೂರಿದರು. ಮುಂದಿನ ದಿನಗಳಲ್ಲಿ ನಡೆಯುವ ಸಭೆಗಳಿಗೆ ಹಾಜರಾಗಲು ಈ ಅಧಿಕಾರಿಗಳಿಗೆ ಸೂಚಿಸಲು ಅಧ್ಯಕ್ಷ ಪ್ರಭಯ್ಯ ಸ್ವಾಮಿ ಅವರು ತಾಪಂ ಇಒಗೆ ಸೂಚಿಸಿದರು. ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿಂದ ಕಾರ್ಯನಿರ್ವಹಣೆಗೆ ತೊಂದರೆ. ಅಂಗನವಾಡಿ ಕಾರ್ಯಕರ್ತೆಯರು ತಾಲೂಕಿನಲ್ಲಿ ಸಮುರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅವರು ಹೋರಾಟಗಳಲ್ಲಿ ಪೂರ್ವಾನುಮತಿ ಪಡೆಯದೇ ಪಾಲ್ಗೊಳ್ಳಲು ತೆರಳುತ್ತಿದ್ದಾರೆ ಎಂದು ಸದಸ್ಯ ಪಿಡ್ಡೆಗೌಡ ಸಭೆಗೆ ದೂರಿದರು. ಇದಕ್ಕೆ ಉತ್ತರಿಸಿದ ಸಿಡಿಪಿಒ ವೀರನಗೌಡ, ಅಂಥ ಕಾರ್ಯಕರ್ತೆಯರ ಮಾಹಿತಿ ನೀಡಿದಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

