ಆನಂದ ಹೆಗಡೆ ಆದರ್ಶವಾದಿ: ಅಮರೇಗೌಡ ವಿರುಪಾಪುರ
ಸಿಂಧನೂರು: ದಿ.ಡಾ.ಆನಂದ ಹೆಗಡೆಯವರು ವೃತ್ತಿಯಲ್ಲಿ ವೈದ್ಯನಾಗಿದ್ದರು, ನಿಷ್ಟಾವಂತ ಸಮಾಜ ಸೇವಕರಾಗಿ, ಶಿಕ್ಷಣ ಪ್ರೇಮಿಯಾಗಿ ಶಾಲೆಯೊಂದನ್ನು ಆರಂಭಿಸಿ ನಮಗೆಲ್ಲಾ ಆದರ್ಶವಾದಿ ಎಂದು ತಾಲೂಕ ಬಿಜೆಪಿ ಅಧ್ಯಕ್ಷ ಅಮರೇಗೌಡ ವಿರುಪಾಪುರ ಹೇಳಿದರು.
ನಗರದ ಡಾ.ಆನಂದ ಹೆಗಡೆ ಆದರ್ಶ ಬಾಲವಿಹಾರ ಮತ್ತು ಹಿರಿಯ ಪ್ರಾಥಮಿಕ ಶಾಲೆಯ 20ನೇ ಶಾಲಾ ವಾರ್ಷಿಕೋತ್ಸವದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು. ಹೆಗಡೆಯವರು ರಾಜಕೀಯ, ಶೈಕ್ಷಣಿಕ ರಂಗ, ಸಾಂಸ್ಕೃತಿಕ ರಂಗದಲ್ಲಿ ಅನನ್ಯ ಸೇವೆ ಸಲ್ಲಿಸಿ ತಮ್ಮ ಚಿರ ನೆನಪುಗಳನ್ನು ಉಳಿಸಿ ಹೋಗಿದ್ದಾರೆ. ಜೊತೆಗೆ ಮಗುವಿನ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರು ಮತ್ತು ಪಾಲಕರ ಜವಬ್ದಾರಿ ಗಣನೀಯವಾಗಿದೆ ಎಂದು ಸಲಹೆ ನೀಡಿದರು.
ಕನಕನಗರ ಸಿಆರ್ಪಿ ಜಿ.ವೀರೇಶ ಮಾತನಾಡಿ, ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗೆ ಕಳುಹಿಸಿ ಇದರಿಂದ ಮಕ್ಕಳಲ್ಲಿ ಶಿಸ್ತು, ಸಂಸ್ಕೃತಿ ಬೆಳೆಯುತ್ತದೆ. ತಿನ್ನವ ಅನ್ನ ಕನ್ನಡವಾದರೆ, ಇಂಗ್ಲೀಷ್ ಊಟದಲ್ಲಿ ಉಪ್ಪಿನಕಾಯಿ ಇದ್ದಂತೆ. ಪ್ರತಿಯೊಬ್ಬ ವಿದ್ಯಾರ್ಥಿಗಳ ಹಿಂದೆ ಶಿಕ್ಷಕರು ಮತ್ತು ಪಾಲಕರು ಇದ್ದರೆ ಎಂದರು. ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ಎಸ್.ಎಲ್.ಭಟ್ ಸಮಾರಂಭವನ್ನುದ್ದೇಶಿಸಿ ಮಾತನಾಡಿದರು. ನಂದಾದೀಪ ಹೆಗ್ಡೆ ಪ್ರಾಸ್ತಾವಿಕ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

