ಅಪೌಷ್ಟಿಕತೆಗೆ ಬಡತನ, ಅನಕ್ಷರತೆ ಕಾರಣ
ರಾಯಚೂರು: ಅಪೌಷ್ಟಿಕತೆ ಸಮಸ್ಯೆಗೆ ಬಡತನ, ನಿರುದ್ಯೋಗ ಹಾಗೂ ಅನಕ್ಷರಸ್ಥ ಕುಟುಂಬದ ಆರ್ಥಿಕ ದುಸ್ಥಿತಿಯೇ ಕಾರಣವಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲಲಿತಮ್ಮ ಹೇಳಿದರು.
ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಅಪೌಷ್ಟಿಕತೆ ನಿವಾರಣೆಯ ಕಾರ್ಯಕ್ರಮಗಳ ಕುರಿತು ಎರಡು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುದಾನ ಒದಗಿಸುತ್ತಿದ್ದು, ಅಂಗನವಾಡಿ ಕೆಂದ್ರಗಳ ಮೂಲಕ ಪೌಷ್ಟಿಕ ಆಹಾರ ಸರಬರಾಜು ಮಾಡಿ ಅಪೌಷ್ಟಿಕತೆ ನಿರ್ಮೂಲನೆಗೆ ಪ್ರಯತ್ತಿಸಲಾಗುತ್ತಿದೆ ಎಂದು ಹೇಳಿದರು.
ಪೌಷ್ಟಿಕ ಆಹಾರದ ಕೊರತೆ: ಜಿಪಂ ಸಿಇಒ ಜ್ಞಾನಪ್ರಕಾಶ್ ಮಾತನಾಡಿ, ಮಕ್ಕಳಲ್ಲಿನ ಅಪೌಷ್ಟಿಕತೆಯ ಸಮಸ್ಯೆಗೆ ಗರ್ಭಿಣಿಯರಿಗೆ ಹಾಗೂ ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕ ಆಹಾರದ ಕೊರತೆಯಾಗುವುದೇ ಕಾರಣವಾಗುತ್ತಿದೆ. ಶಿಕ್ಷಣದ ಕೊರತೆ, ಬಡತನಗಳು ಸಮಸ್ಯೆ ಹೆಚ್ಚಳಕ್ಕೆ ದಾರಿಯಾಗಿದೆ ಎಂದು ಹೇಳಿದರು.
ಬಡತನ ನಿರುದ್ಯೋಗ, ಬಾಲ್ಯ ವಿವಾಹದಂಥ ಸಮಸ್ಯೆಗಳು ಅಪೌಷ್ಟಿಕತೆಗೆ ಕಾರಣವಾಗುತ್ತಿವೆ. ಪೌಷ್ಟಿಕ ಆಹಾರ ಸೇವನೆ, ಶುದ್ಧವಾದ ನೀರು, ಗಾಳಿ, ಸ್ವಚ್ಛ ಪರಿಸರ ನಿರ್ಮಾಣ ನಿಟ್ಟಿನಲ್ಲಿ ಜನತೆ ಮುಂದಾಗಬೇಕಿದೆ. ಪೌಷ್ಟಿಕತೆ ಸಮಸ್ಯೆ ನಿವಾರಣಾ ಕಾರ್ಯವು ಕೇವಲ ಒಂದೆರಡು ಇಲಾಖೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲ ಇಲಾಖೆಗಳ ಸಹಕಾರದೊಂದಿಗೆ ಯೋಜನೆಯ ಅನುಷ್ಠಾನಕ್ಕೆ ಶ್ರಮಿಸುವಂತೆ ಮನವಿ ಮಾಡಿದರು.
ಅಧಿಕಾರಿಗಳಿಗೆ ತರಬೇತಿ: ಜಿಪಂ ಉಪಾಧ್ಯಕ್ಷ ಕೆ.ಶರಣಪ್ಪ ಮಾತನಾಡಿ, ಜಿಲ್ಲೆಯಲ್ಲಿ ಅಪೌಷ್ಟಿತೆಯ ನಿವಾರಣೆಗೆ ಜಿಪಂ ಹಾಗೂ ಸರ್ಕಾರ ಶ್ರಮಿಸುತ್ತಿವೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಕಾರ್ಯಕ್ರಮ ಸಮರ್ಪಕ ಅನುಷ್ಠಾನಗೊಳಿಸುವ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಹೇಳಿದರು.
ಮೈಸೂರು ಆಡಳಿತ ತರಬೇತಿ ಸಂಸ್ಥೆಯ ಬೋಧಕಿ ದೀಪಾ ಅವರು ಪ್ರಾತ್ಯಕ್ಷಿಕೆಗಳ ಮೂಲಕ ಹಾಗೂ ಪ್ರಶ್ನಾವಳಿಗಳ ಮೂಲಕ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಭಾಗಹಿಸಿದ್ದರು. ಮುಖ್ಯ ಯೋಜನಾಧಿಕಾರಿ ಡಾ. ಟಿ.ರೋಣಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

