ರಾಯಚೂರು

ಲಿಂಗಸ್ಗೂರಲ್ಲಿ ಕಾಂಗ್ರೆಸ್ ಗೆಲವು: ನಾಯಕ

Published On :

ಲಿಂಗಸ್ಗೂರು: ಬರುವ ವಿಧಾನಸಭೆ ಚುನಾವಣೆಯಲ್ಲಿ ಲಿಂಗಸ್ಗೂರು ಕ್ಷೇತ್ರದಲ್ಲಿ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಪಕ್ಷದ ಯುವಘಟಕ  ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನಾಯಕ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣ ಹಾಗೂ ಸುಕ್ಷೇತ್ರ ಅಮರೇಶ್ವರದಲ್ಲಿ ದೇವಸ್ಥಾನ, ದರ್ಗಾ ಹಾಗೂ ಚರ್ಚ್‌ಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜನರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುವಲ್ಲಿ ವಿಫಲವಾಗಿದೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಈ ನಿಟ್ಟಿನಲ್ಲಿ ಪೂಜೆ ಸಲ್ಲಿಸುತ್ತಿರುವುದಾಗಿ ಹೇಳಿದರು.
ಶ್ರಮಿಸುವೆ: ಲಿಂಗಸ್ಗೂರು ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ನಾನು ಕೂಡ ಆಕಾಂಕ್ಷಿ. ಪಕ್ಷದ ಹೈಕಮಾಂಡ್ ಟಿಕೇಟ್ ನೀಡಿದರೆ ಸ್ಪರ್ಧಿಸುವೆ. ಬೇರೊಬ್ಬರಿಗೆ ಟಿಕೇಟ್ ನೀಡಿದರೂ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಶ್ರಮಿಸಿ, ಪಕ್ಷ ಆಡಳಿತಕ್ಕೆ ಬರುವಲ್ಲಿ ಶ್ರಮಿಸುವುದಾಗಿ ತಿಳಿಸಿದರು.
ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಶಿಕ್ಷಣ, ಕೈಗಾರಿಕೆ, ಉದ್ಯೋಗ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯಿಂದ ಜನತೆ ತೀವ್ರ ತೊಂದರೆ ಅನುಭವಿಸುವಂತಾಗಿದೆ. ನಾನು ಸ್ಪರ್ಧಿಸಿ, ಗೆಲುವು ಸಾಧಿಸಿದರೆ, ರೈತರಿಗೆ, ನಿರುದ್ಯೋಗಿ ಯುವಕರಿಗೆ, ಮಹಿಳೆಯರಿಗೆ ಅಗತ್ಯ ಸೌಕರ್ಯ ಕಲ್ಪಿಸುವ ಜೊತೆಗೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ಹುದ್ದೆ ಭರ್ತಿ ಮಾಡಿ: ಇತ್ತೀಚಿಗೆ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಮಂಡಿಸಿದ ಬಜೆಟ್ ಕಾರ್ಯಗತವಾಗದ ಬಜೆಟ್ ಆಗಿದ್ದು, ರಾಜ್ಯದಲ್ಲಿ 43 ನೂತನ ತಾಲೂಕುಗಳ ರಚನೆ ಮಾಡಿರುವುದು ಸ್ವಾಗತಾರ್ಹ ಕ್ರಮವಾಗಿದೆ.  ವಿವಿಧ ಹುದ್ದೆಗಳು ಖಾಲಿಯಿದ್ದು, ಹೊಸ ತಾಲೂಕುಗಳಿಗೆ ಹುದ್ದೆಗಳ ಭರ್ತಿ  ಸಾಧ್ಯವಾಗಲಿದೆಯೇ ಎಂದು ಪ್ರಶ್ನಿಸಿದರು.
---

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.