ವೈದ್ಯರ ಮುಷ್ಕರ ಅಂತ್ಯ; ಆರೋಗ್ಯ ಸೇವೆ ಪುನಾರಂಭ
ರಾಯಚೂರು: ರಾಜ್ಯ ಆರೋಗ್ಯ ಇಲಾಖೆಯ ವೈದ್ಯರು ಮತ್ತು ಇತರೆ ಸಿಬ್ಬಂದಿಯ ಮುಷ್ಕರ ಸದ್ಯಕ್ಕೆ ಹಿಂಪಡೆದ ಹಿನ್ನೆಲೆ ಮಂಗಳವಾರ ಮಧ್ಯಾಹ್ನದಿಂದಲೇ ಜಿಲ್ಲೆಯಲ್ಲಿ ಸರ್ಕಾರದ ಆರೋಗ್ಯ ಸೇವೆಗಳು ಸಹಜತೆ ಮರಳಿದವು.
ಕಳೆದ ಫೆ. 8ರಿಂದ ಜಿಲ್ಲಾದ್ಯಂತ ವೈದ್ಯರು ಮುಷ್ಕರದಲ್ಲಿ ತೊಡಗಿದ್ದರಿಂದ ಆರೋಗ್ಯ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿದ್ದವು. ಅದರಿಂದ ಜಿಲ್ಲೆಯ ನಗರ ಸೇರಿದಂತೆ ಗ್ರಾಮೀಣ ಪ್ರದೇಶದ ರೋಗಿಗಳು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳಿಗೆ ಮೊರೆ ಹೋಗುವಂತಾಗಿತ್ತು.
ಆದರೆ ಮಂಗಳವಾರ ಬೆಳಗ್ಗೆ ಆರೋಗ್ಯ ಇಲಾಖೆಯ ನೌಕರರ ಸಂಘದ ಕೇಂದ್ರ ಸಮಿತಿ ಸೂಚನೆ ಮೇರೆಗೆ ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿ ಮುಷ್ಕರ ಸದ್ಯಕ್ಕೆ ವಾಪಸು ಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಬಹುತೇಕ ಎಲ್ಲ ಕಡೆ ಮಂಗಳವಾರ ಮಧ್ಯಾಹ್ನದಿಂದಲೇ ಆರೋಗ್ಯ ಸೇವೆಗಳು ಸರ್ಕಾರದ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಸಹಜತೆಗೆ ಮರಳಿದೆ.
ಈ ಕುರಿತು 'ಕನ್ನಡಪ್ರಭ'ಕ್ಕೆ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ನಾಯಕ, ಜಿಲ್ಲಾದ್ಯಂತ ಆರೋಗ್ಯ ಸೇವೆಗಳನ್ನು ಪುನಾರಂಭಿಸಲಾಗಿದೆ. ಎಲ್ಲೆಡೆ ಆಸ್ಪತ್ರೆಗಳಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ಸೇವೆಗೆ ಮಂಗಳವಾರದಿಂದಲೇ ಹಾಜರಾಗಲು ಸೂಚಿಸಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

