ಶಾಶ್ವತ ಕುಡಿವ ನೀರು ಯೋಜನೆ ಕಲ್ಪಿಸಲು ಆಗ್ರಹ
ಲಿಂಗಸ್ಗೂರು: ತಾಲೂಕಿನ ರೋಡಲಬಂಡಾ(ತವಗ) ಗ್ರಾಮಕ್ಕೆ ಶಾಶ್ವತ ಕುಡಿವ ನೀರು ಯೋಜನೆ ಕಲ್ಪಿಸುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಮಂಗಳವಾರ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೀರಭದ್ರಪ್ಪ ಅವರಿಗೆ ಮನವಿ ಸಲ್ಲಿಸಿದರು.
ರೋಡಲಬಂಡಾ(ತವಗ) ಗ್ರಾಪಂ ವ್ಯಾಪ್ತಿಯ ರೋಡಲಬಂಡಾ, ತವಗ, ಯಲಗಟ್ಟ, ಕಡ್ಡೋಣಿ, ಮಲ್ಲಾಪುರ ಗ್ರಾಮಗಳಲ್ಲಿ ಅಂತರ್ಜಲ ಕುಸಿತದಿಂದ ಕುಡಿವ ನೀರಿನ ಸಮಸ್ಯೆಯಿಂದ ಎದುರಾಗಿದ್ದು, ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಗ್ರಾಪಂ ಆಡಳಿತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಕೂಡಲೇ ಶಾಶ್ವತ ಕುಡಿವ ನೀರಿನ ಯೋಜನೆ ಕಲ್ಪಿಸಬೇಕು. ಇಲ್ಲದಿದ್ದರೆ ತಾಪಂ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಮನವಿಯಲ್ಲಿ ಎಚ್ಚರಿಸಿದ್ದಾರೆ.
ಈ ವೇಳೆ ಕರವೇ ತಾಲೂಕಾಧ್ಯಕ್ಷ ಜಿಲಾನಿ ಪಾಶಾ, ಶಿವರಾಜ ನಾಯಕ, ಆಂಜನೇಯ ಭಂಡಾರಿ, ಅಜೀಜ್ ಪಾಷಾ, ರಮೇಶ ನಾಯಕ, ಅಲ್ಲಾವುದ್ದಿನ್ ಪಟೇಲ್, ಗ್ರಾಮ ಘಟಕದ ಮಲ್ಲಿಕಾರ್ಜುನ, ಹನುಮಂತ, ದುರುಗಪ್ಪ, ರಾಜು ಯಲಗಟ್ಟ ಸೇರಿದಂತೆ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

