ನವದಾಂಪತ್ಯಕ್ಕೆ ಕಾಲಿಟ್ಟ ಪ್ರೇಮಿಗಳು
ಸಿಂಧನೂರು: ತಾಲೂಕಿನ ಅಂಬಾಮಠ ಗ್ರಾಮದ ಅಂಬಾದೇವಿ ದೇವಸ್ಥಾನದಲ್ಲಿ ಯುವ ಪ್ರೇಮಿಗಳಿಬ್ಬರು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಎನ್.ಮೂರ್ತಿ ಸ್ಥಾಪಿತ) ನೇತೃತ್ವದಲ್ಲಿ ವಿವಾಹವಾದರು.
ಎರಡು ವರ್ಷಗಳಿಂದ ಸಿಂಧನೂರು ತಾಲೂಕಿನ ಮಲ್ಲಾಪುರದ ದುಗ್ಗಪ್ಪ ಹಾಗೂ ಗಂಗಾವತಿ ತಾಲೂಕಿನ ಸೋಮನಾಳ ಗ್ರಾಮದ ಶೃತಿ ಎನ್ನುವವರು ಪರಸ್ಪರ ಪ್ರೀತಿಸುತ್ತಿದ್ದರು.
ಅವರಿಗೆ ಮದುವೆ ಮಾಡುವ ಉದ್ದೇಶದಿಂದ ಇವರಿಬ್ಬರ ಕುಟುಂಬದವರೊಂದಿಗೆ ದಲಿತ ಸಂಘರ್ಷ ಸಮಿತಿ ಸಂಘಟನಾ ಕಾರ್ಯದರ್ಶಿ ನಾಗರಾಜ ಸಾಸಲಮರಿ, ಸಹಕಾರ್ಯದರ್ಶಿ ಬಸವರಾಜ ಸಾಸಲಮರಿ, ಅಧ್ಯಕ್ಷ ಶ್ಯಾಮಪ್ಪ ಮೇರನಾಳ, ಮುಖಂಡರಾದ ಹನುಮಂತ ಸಾಸಲ ಮರಿ, ಯಲ್ಲಪ್ಪ ಸಾಸಲಮರಿ, ಅನಿಲರಾಜ ಸಾಲಗುಂದಾ, ಹನುಮಂತ ಸಾಲಗುಂದಾ ಅವರು ಚರ್ಚೆ ನಡೆಸಿ, ಅವರ ಸಮ್ಮುಖದಲ್ಲಿ ಮದುವೆ ಮಾಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

