ರಾಯಚೂರು

ಸದಾಶಿವ ಆಯೋಗ; ಎಂಆರ್‌ಎಚ್ಚೆಸ್ ಸಜ್ಜು

Published On :

ರಾಯಚೂರು: ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾ ಸಮಿತಿ ಸಭೆ ಇತ್ತೀಚೆಗೆ ಮಸ್ಕಿಯಲ್ಲಿ ನಡೆದು ನ್ಯಾ. ಸದಾಶಿವ ಆಯೋಗದ ವರದಿ ಅನುಷ್ಠಾನ ಕೈಬಿಟ್ಟಿರುವ ಬಿಜೆಪಿ ಸರ್ಕಾರದ ವಿರುದ್ಧ ಹೋರಾಡಲು ನಿರ್ಧಾರ ಕೈಗೊಳ್ಳಲಾಯಿತು.
ಮಸ್ಕಿಯಲ್ಲಿ ಮುಖಂಡ ದಾನಪ್ಪ ನಿಲೋಗಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಅಧಿವೇಶನದ ನಂತರದಲ್ಲಿ ಮುಖ್ಯಮಂತ್ರಿ ಶೆಟ್ಟರ್ ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ನೀಡಿದ್ದ ಭರವಸೆ ಹುಸಿಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್, ಜಾತ್ಯತೀತ ಜನತಾ ದಳ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳು ಮೌನವಹಿಸಿವೆ ಎಂದು ಸಭೆಯಲ್ಲಿ ಆರೋಪಿಸಲಾಯಿತು.
ಮುಂಬರುವ ಚುನಾವಣೆಗಳಲ್ಲಿ ಎಲ್ಲ ರಾಜಕೀಯ ಪಕ್ಷಗಳಿಗೆ ದಲಿತರಿರುವ ಪ್ರದೇಶಕ್ಕೆ ಪ್ರವೇಶಿಸದಂತೆ ದಿಗ್ಬಂಧನ ನಡೆಸಲು ಸಭೆ ನಿರ್ಧರಿಸಿತು. ಎಲ್ಲ ರಾಜಕೀಯ ಪಕ್ಷಗಳ ವಿರುದ್ಧ ಹೋರಾಟ ರೂಪಿಸುವಲ್ಲಿ ಜಿಲ್ಲಾದ್ಯಂತ ಸಮುದಾಯವನ್ನು ಜಾಗೃತಗೊಳಿಸುವ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳಲಾಯಿತು.
ಜಾಗೃತಿಯಿಂದ ಯಾವುದೇ ನಿರ್ಣಯಕ್ಕೆ ಮೌಲ್ಯ ಎನ್ನಲಾಯಿತು. ಈ ವೇಳೆ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳಾಗಿ ಮಲ್ಲಯ್ಯ ಬಳ್ಳಾ- ಗೌರವಾಧ್ಯಕ್ಷ, ಹೇಮರಾಜ ಅಸ್ಕಿಹಾಳ- ಜಿಲ್ಲಾಧ್ಯಕ್ಷ, ಶಿವಪ್ಪ ಬಲ್ಲಿದವ್- ಉಪಾಧ್ಯಕ್ಷ, ಅಬ್ರಹಾಂ ಹೊನ್ನಟಗಿ- ಪ್ರಧಾನ ಕಾರ್ಯದರ್ಶಿ, ಆರೋಗ್ಯಪ್ಪ ಪನ್ನೂರು- ಸಂ.ಕಾರ್ಯದರ್ಶಿ, ಅಮರೇಶ್- ಖಜಾಂಚಿ ಸೇರಿ ಅನೇಕರನ್ನು ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೇಮಿಸಲಾಯಿತು. ಸಭೆಯಲ್ಲಿ ಪ್ರಮುಖರಾದ ಜೆ.ಬಿ.ರಾಜು, ಅಂಬಣ್ಣ ಅರೋಲಿಕರ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.