ದುರಸ್ತಿ ಕಾಣದ ಬನ್ನಿಗೋಳ ರಸ್ತೆ
ಮುದಗಲ್: ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿರುವ ರಾಮತ್ನಾಳ- ಚಿಕ್ಕಹೇಸರೂರು ರಸ್ತೆ ಮಧ್ಯದ ಬನ್ನಿಗೋಳ ಗ್ರಾಮದ ಮುಖ್ಯರಸ್ತೆ ಸಂಚಾರಕ್ಕೆ ಸಂಚಕಾರ ತಂದಿದೆ.
ಮುದಗಲ್ನಿಂದ ಸುಕ್ಷೇತ್ರ ಅಂಕಲಿಮಠಕ್ಕೆ ಹೋಗಬೇಕಾದರೆ ಇದೇ ಗ್ರಾಮದ ರಸ್ತೆ ಮೂಲಕ ಹೋಗಬೇಕು, ಗ್ರಾಮದ ಮುಖ್ಯ ರಸ್ತೆಯಲ್ಲಿ ಚರಂಡಿ ನೀರು, ಮಳೆ ನೀರು, ಮನೆಗಳ ಕಲ್ಮಷ ನೀರು ಹರಿಯುತ್ತಿದ್ದು, ರಸ್ತೆ ಸದಾ ಕೆಸರು ಗದ್ದೆಯಂತಾಗಿದೆ.
ರಸ್ತೆಯಲ್ಲಿ ವಾಹನ ಸಂಚರಿಸುವಾಗ ಪಕ್ಕದಲ್ಲಿರುವ ಪಾದಚಾರಿಗಳಿಗೆ ಕೆಸರು ಸಿಡಿಯುತ್ತದೆ. ಬೈಕ್ಗಳಲ್ಲಿ ಸಂಚರಿಸುವ ಸಾಕಷ್ಟು ಜನರು ಜಾರಿ ಬಿದ್ದು ಗಾಯ ಮಾಡಿಕೊಂಡಿರುವ ಘಟನೆಗಳು ನಡೆದಿವೆ. ಹೀಗಿದ್ದರೂ ರಸ್ತೆ ದುರಸ್ತಿಗೊಳಿಸಲು ಕ್ಷೇತ್ರದ ಶಾಸಕರಾಗಲಿ, ತಾಪಂ, ಜಿಪಂ, ಗ್ರಾಪಂ.ನವರಾಗಲಿ ಮುಂದಾಗದೆ ಇರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ರಸ್ತೆ ಮೇಲ್ದರ್ಜೆಗೇರಿದೆ ಎಂದು ಹೇಳುತ್ತಿರುವ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗುಂಡಿಗಳನ್ನು ಮುಚ್ಚುವ ಪ್ರಯತ್ನ ಮಾಡಿಲ್ಲ. ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಗ್ರಾಮದ ಅಧಿದೇವತೆ ವೀರಭದ್ರೇಶ್ವರ ಜಾತ್ರೆ ಬಂದಿದ್ದು, ಸಾವಿರಾರು ಭಕ್ತರು ಆಗಮಿಸುತ್ತಾರೆ. ಈಗಲಾದರೂ ದುರಸ್ತಿಗೊಳಿಸಬೇಕು. ಇಲ್ಲದಿದ್ದರೆ ಗ್ರಾಮಸ್ಥರು ಧರಣಿ, ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

