ರಾಯಚೂರು

ಅತ್ಯಾಚಾರ; ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

Published On :

ರಾಯಚೂರು: ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಸೋಮವಾರ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ಕುರಿತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಎದುರು ಕಾರ್ಯಕರ್ತರು ಪ್ರತಿಭಟನೆ ನಡೆಸಿ, ತಾಲೂಕಿನ ಸಿಂಗನೋಡಿ ಗ್ರಾಪಂ ವ್ಯಾಪ್ತಿಯ ಬಾಪೂರು ಗ್ರಾಮದ ನಿವಾಸಿ ಹರಿಜನ ಸಮಾಜದ ಅಪ್ರಾಪ್ತೆ ಮೇಲೆ ಅದೇ ಗ್ರಾಮದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. ಅವನ ವಿರುದ್ಧ ಕಠಿಣ ಶಿಕ್ಷೆ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸಂರಕ್ಷಣೆಗೆ ಒತ್ತಾಯ: ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತೆಯ ಕುಟುಂಬದವರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 2 ಲಕ್ಷ ಪರಿಹಾರ ನೀಡಬೇಕು. ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿಗೆ ಸಮಾಜ ಬೆಂಬಲಬೇಕಿದೆ. ಸರ್ಕಾರ ಸಹ ಸಾಮಾಜಿಕ, ನೈತಿಕ ಮತ್ತು ಆರ್ಥಿಕವಾಗಿ ಆಕೆಯನ್ನು ಸಂರಕ್ಷಿಸಲು ಮುಂದಾಗಬೇಕಿದೆ ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಅತ್ಯಾಚಾರಕ್ಕೀಡಾದ ಮಹಿಳೆಗೆ ವಸತಿ ಯೋಜನೆ ಅಡಿ ಮನೆ ನೀಡಬೇಕು. ಸಂತ್ರಸ್ತ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಮಿತಿ ಅಧ್ಯಕ್ಷ ಕರಿಯಪ್ಪ ಅಚ್ಚೊಳ್ಳಿ, ಎಚ್. ಪದ್ಮಾ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.