ಇಂದು ವಾರ್ಷಿಕ ಸಮ್ಮೇಳನ
ಸಿಂಧನೂರು: ನಗರದ ಆದರ್ಶ ಕಾಲೋನಿಯಲ್ಲಿರುವ ಕರ್ನಾಟಕ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ವಾರ್ಷಿಕೋತ್ಸವವು ಫೆ.19ರಂದು ಬೆ.10ಕ್ಕೆ ಕಾಲೇಜು ಆವರಣದಲ್ಲಿ ಜರುಗಲಿದೆ. ಅಧ್ಯಕ್ಷತೆಯನ್ನು ಕರ್ನಾಟಕ ಸ್ವತಂತ್ರ ಪಪೂ ಕಾಲೇಜಿನ ಅಧ್ಯಕ್ಷ ಕೆ.ಬಸವರಾಜ ಗೌಡನಭಾವಿ ವಹಿಸುವರು. ಕಾರ್ಯಕ್ರಮವನ್ನು ಎಸ್ಪಿ ಎಸ್.ಬಿ. ಬಿಸ್ನಳ್ಳಿ ಉದ್ಘಾಟಿಸುವರು. ಉಪನ್ಯಾಸವನ್ನು ರಾಯಚೂರು ಹೈ-ಕ ಹೋರಾಟ ಸಮಿತಿ ಅಧ್ಯಕ್ಷ ರಜಾಕ್ ಉಸ್ತಾದ್ ಮಂಡಿಸುವರು. ರಾಯಚೂರು ಡಿಡಿಪಿಐ ಕೆ.ಶರಣಪ್ಪ, ಪ್ರಾಚಾರ್ಯ ಶಂಕರ ಗುರಿಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಅತಿಥಿಗಳಾಗಿ ರೈತ ಸಂಘದ ಜಿಲ್ಲಾಧ್ಯಕ್ಷ ಎಚ್.ಎನ್. ಬಡಿಗೇರ, ಪ್ರಹ್ಲಾದ ಗುಡಿ, ಬೋಧನ ಚಕ್ರವರ್ತಿ, ಸರ್ಕಾರಿ ಪದವಿ ಕಾಲೇಜು ಪ್ರಾಚಾರ್ಯ ಪ್ರಹ್ಲಾದರೆಡ್ಡಿ, ವೆಂಕಟೇಶ್ವರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗಂಗನಗೌಡ, ರೆಡ್ಡಿ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ನಾಗೇಶ ಹೇರೂರು, ಮೀನಾಕ್ಷಿ ಪಬ್ಲಿಕ್ ಶಾಲೆಯ ಮುಖ್ಯಗುರು ಚಂದ್ರಕಲಾ, ಶಿವಪ್ಪ, ಸೇವಾಭಾರತಿ ಮುಖ್ಯಗುರು ಶಾಂತಾ ಬಸವರಾಜ, ಯಮನಪ್ಪ ಆಗಮಿಸಲಿದ್ದಾರೆ.
ಜಿಲ್ಲಾಧಿಕಾರಿ ನಿಯುಕ್ತಿ
ರಾಯಚೂರು: ರಾಜ್ಯ ಸರ್ಕಾರವು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಎನ್. ನಾಗರಾಜ್ ಅವರನ್ನು ನಿಯುಕ್ತಿಗೊಳಿಸಿದ್ದು, ಅವರು ಮಂಗಳವಾರ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಮೊದಲು ಜಿಲ್ಲಾಧಿಕಾರಿಯಾಗಿದ್ದ ಎಂ.ವಿ. ಸಾವಿತ್ರಿ ಅವರು ಚಾಮರಾಜನಗರ ಜಿಲ್ಲೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ನಾಗರಾಜ್ ಅವರನ್ನು ವರ್ಗಾಯಿಸಿದ್ದು, ಅವರು ಮಂಗಳವಾರ ಅಧಿಕಾರ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

