ನೀತಿ ಸಂಹಿತೆ ಉಲ್ಲಂಘನೆ: ಮುನ್ನೆಚ್ಚರಿಕೆಗೆ ಆಗ್ರಹ
ಲಿಂಗಸ್ಗೂರು: ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ನೀತಿ ಸಂಹಿತೆ ಉಲ್ಲಂಘಿಸಿದರೆ ಅಂತಹ ಅಭ್ಯರ್ಥಿ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್ ರಾಮಣ್ಣ ಅವರಿಗೆ ಮನವಿ ಸಲ್ಲಿಸಿದರು.
ಸ್ಥಳೀಯ ಪುರಸಭೆ ವ್ಯಾಪ್ತಿಯಲ್ಲಿ 23 ವಾರ್ಡುಗಳು ಬರುತ್ತಿದ್ದು, ಚುನಾವಣೆಗಳು ಮಾ. 7ರಂದು ನಡೆಯಲಿದ್ದು, ಪ್ರಸ್ತುತ ನೀತಿ ಸಂಹಿತೆ ಜಾರಿಯಲ್ಲಿದೆ. ವಿವಿಧ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ ನಂತರ ಮತದಾರರನ್ನು ತಮ್ಮತ್ತ ಸೆಳೆಯಲು ಹಣ, ಬಟ್ಟೆ, ಮದ್ಯ ಹಂಚುವುದು ಅಥವಾ ಊಟದ ವ್ಯವಸ್ಥೆ ಕಲ್ಪಿಸುವುದು ಸೇರಿ ಇನ್ನಿತರೆ ಆಮಿಷಗಳನ್ನೊಡ್ಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸುವ ಕಾರ್ಯ ಮಾಡುವುದು ಈಚಿನ ಬೆಳವಣಿಗೆ. ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸುವಂಥ ಅಭ್ಯರ್ಥಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಮೌಲಾಹುಸೇನ್, ಪ್ರಧಾನ ಕಾರ್ಯದರ್ಶಿ ಹನುಮಂತ ಹೂಗಾರ, ನಗರ ಘಟಕದ ಅಧ್ಯಕ್ಷ ರವಿಕುಮಾರ ಚಂದನಕೇರಿ, ಜಿಲ್ಲಾ ಕಾರ್ಯದರ್ಶಿ ರಾಜೇಶ ಮಾಣಿಕ್, ಬಸ್ಸಯ್ಯ ಫೂಲಬಾವಿ, ಶಂಕರ ಹುಲಿಗುಡ್ಡ, ಬಸವರಾಜಸ್ವಾಮಿ, ವೆಂಕಟೇಶ ಗೋನವಾರ, ಅಮರೇಶ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

