ರಾಯಚೂರು

ಶಾಂತಲಾಗೆ ಪಿಎಚ್‌ಡಿ ಪ್ರದಾನ

Published On :

ಸಿಂಧನೂರು: ನಗರದ ಶಾಂತಲಾ ಶಾಶ್ವತಯ್ಯಸ್ವಾಮಿ ಮುಕ್ಕುಂದಿಮಠ ಅವರಿಗೆ ಗುಲ್ಬರ್ಗ ವಿಶ್ವವಿದ್ಯಾಲಯ ಪಿಎಚ್‌ಡಿ ಪ್ರದಾನ ಮಾಡಿದೆ. ರಾಯಚೂರು ಎಲ್‌ವಿಡಿ ಕಾಲೇಜಿನ ಉಪ ಸಂಸ್ಥೆಯಾದ ಎಸ್‌ಆರ್‌ಪಿಎಸ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿಯಾಗಿರುವ ಶಾಂತಲಾ ಮುಕ್ಕುಂದಿಮಠ ಹಾವಿನಾಳ ಕಲ್ಲಯ್ಯ ಒಂದು ಅಧ್ಯಯನ ಕುರಿತು ಎಲ್‌ವಿಡಿ ಕಾಲೇಜಿನ ಅಧ್ಯಾಪಕ ಡಾ. ಬಸವಲಿಂಗ ಸೊಪ್ಪಿಮಠ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿಯನ್ನು ಪ್ರದಾನ ಮಾಡಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆ; ನಿಷೇಧಾಜ್ಞೆ ಜಾರಿ
ರಾಯಚೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯಲ್ಲಿನ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಸ್ಪರ್ಧಾತ್ಮಕ ಪರೀಕ್ಷೆಗಳು ನಗರದಲ್ಲಿ ಫೆ.23, 24ರಂದು ನಡೆಯಲಿರುವ ಹಿನ್ನೆಲೆ ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಗರದ 36 ಪರೀಕ್ಷಾ ಕೇಂದ್ರಗಳಲ್ಲಿ ಎರಡು ದಿನ ನಡೆಯುವ ಪರೀಕ್ಷೆಯ ವೇಳೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ನಾಗರಾಜು ಜಾರಿಗೊಳಿಸಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ ಸಿಬ್ಬಂದಿ, ಅಧಿಕಾರಿಗಳು ಮತ್ತು ಪರೀಕ್ಷಾರ್ಥಿಗಳನ್ನು ಹೊರತುಪಡಿಸಿ ಅನ್ಯರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಶಿಷ್ಯವೇತನಕ್ಕೆ ಅರ್ಜಿ
ರಾಯಚೂರು: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕ್ರೀಡಾ ಶಿಷ್ಯ ವೇತನಕ್ಕಾಗಿ ಅರ್ಹರಿಂದ ಅರ್ಜಿ ಕರೆಯಲಾಗಿದೆ. ಕ್ರೀಡಾಪಟುಗಳು ಫೆ.25ರೊಳಗೆ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಇಲಾಖೆಗೆ ಸಲ್ಲಿಸಬೇಕು. ವಿವರಕ್ಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು.
ಮನೆಯಲ್ಲಿ ಕಳವು
ರಾಯಚೂರು: ತಾಲೂಕಿನ ಶಕ್ತಿನಗರದಲ್ಲಿ ಮಹಿಳೆಯೊಬ್ಬರಿಗೆ ಬೆದರಿಕೆಯೊಡ್ಡಿ ಮನೆಯಲ್ಲಿದ್ದ ಚಿನ್ನಾಭರಣ ದೋಚಲಾಗಿದೆ. ಗ್ರಾಮದ ರಾಘವೇಂದ್ರ ಕಾಲೋನಿಯ ನಿವಾಸಿ ರುಕ್ಸಾನಾ ಎಂಬುವರು ಮನೆಯಲ್ಲಿದ್ದಾಗ ಬೆಳ್ಳಿ ತೊಳೆದುಕೊಡುವುದಾಗಿ ಆಗಮಿಸಿದ ಅಪರಿಚಿತರು ಬೆದರಿಸಿ ಮನೆಯಲ್ಲಿದ್ದ 24 ಸಾವಿರ ಮೌಲ್ಯದ ಚಿನ್ನಾಭರಣ ದೋಚಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಶಕ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.