ವಿದ್ಯಾರ್ಥಿ ಭವಿಷ್ಯ ಉಜ್ವಲವಾಗಲು ಮಾರ್ಗದರ್ಶನ ಅವಶ್ಯ: ಹುಡೇದ್
ಸಿಂಧನೂರು: ವಿದ್ಯಾವಂತ ಯುವಕ- ಯವತಿಯರ ಭವಿಷ್ಯ ಉಜ್ವಲವಾಗಲು ಮಾರ್ಗದರ್ಶನ ಅವಶ್ಯವಾಗಿದೆ ಎಂದು ಸಿಡಾಕ್ ಜಿಲ್ಲಾ ಕೈಗಾರಿಕಾ ತರಬೇತಿ ಕೇಂದ್ರದ ಅಧಿಕಾರಿ ಜಿ.ಯು. ಹುಡೇದ್ ತಿಳಿಸಿದರು.
ನಗರದ ಜೈನ್ ಕಲ್ಯಾಣ ಮಂಟಪದಲ್ಲಿ ಅಬ್ದುಲ್ ನಜೀರಸಾಬ ರಾಜ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮೈಸೂರು, ಜಿಲ್ಲಾ ಪಂಚಾಯಿತಿ ರಾಯಚೂರು ಹಾಗೂ ಕರ್ನಾಟಕ ಉದ್ಯಮಶೀಲಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಸಿಂಧನೂರು ತಾಲೂಕಿನ ಹಿಂದುಳಿದ ಪ್ರದೇಶಾಭಿವೃದ್ಧಿ ಅನುದಾನ ನಿಧಿ (ಬಿಆರ್‌ಜಿಡಿ) ಯೋಜನೆ ಅಡಿಯಲ್ಲಿ ವಿದ್ಯಾವಂತ ಯುವಕ- ಯವತಿಯರಿಗಾಗಿ ಹಮ್ಮಿಕೊಂಡಿದ್ದ ಉಜ್ವಲ ಭವಿಷ್ಯ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸಮಾರಂಭವನ್ನು ಬಿಆರ್‌ಜಿಎಫ್ ಜಿಲ್ಲಾ ಸಂಯೋಜಕ ಟಿ.ಲಾರೆನ್ಸ್ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ಬಿಆರ್‌ಜಿಎಫ್ ಯೋಜನೆ ಅನುಷ್ಠಾನಗೊಳ್ಳುತ್ತಿರುವ ಬಗ್ಗೆ ವಿವರಿಸಿದರು. ಜೆ.ಸಿ. ಅಂತಾರಾಷ್ಟ್ರೀಯ ತರಬೇತಿದಾರ ಬಸವರಾಜ ಪಿ., ಕೆಜಿಎಫ್ ಶಿವಕುಮಾರ ರಾಘವೇಂದ್ರ ಹಾಗೂ ಕಾಲೇಜುಗಳ ಉಪನ್ಯಾಸಕರು ಪಾಲ್ಗೊಂಡಿದ್ದರು.
ಕು. ಪಾರ್ವತಿ ಪ್ರಾರ್ಥಿಸಿದರು. ಮೌನೇಶ ವಂದಿಸಿದರು. ಶ್ರೀಕಾಂತ ಪಾಟೀಲ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ 350ಕ್ಕೂ ಹೆಚ್ಚು ವಿದ್ಯಾವಂತ ಯುವಕ- ಯುವತಿಯರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

