ಜಿಲ್ಲೆಯ 21 ಶಾಲೆಗಳಿಗೆ ಪರಿಸರ ಮಿತ್ರ ಪ್ರಶಸ್ತಿ
ರಾಯಚೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಆಯೋಜಿಸಿದ್ದ ಪರಿಸರ ಮಿತ್ರ ಶಾಲೆ ಸ್ಪರ್ಧೆಯಲ್ಲಿ ಜಿಲ್ಲೆಯ 21 ಶಾಲೆಗಳಿಗೆ ಪ್ರಶಸ್ತಿ ಲಭಿಸಿದೆ. ಸ್ಪರ್ಧೆಯಲ್ಲಿ ಜಿಲ್ಲೆಯ ಒಟ್ಟು 39 ಶಾಲೆಗಳು ಭಾಗವಹಿಸಿದ್ದು, ಆ ಪೈಕಿ 21 ಶಾಲೆಗಳು ಉತ್ತಮ ಸಾಧನೆ ತೋರುವ ಮೂಲಕ ಪರಿಸರ ಮಿತ್ರ ಪ್ರಶಸ್ತಿಗೆ ಭಾಜನವಾಗಿವೆ ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಕಚೇರಿಯ ಪ್ರಕಟಣೆ ತಿಳಿಸಿದೆ.
ಸಿಂಧನೂರು ತಾಲೂಕಿನಲ್ಲಿ ಕೆ.ಹಂಚಿನಾಳ ಕ್ಯಾಂಪಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗುಂಡಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆ, ಗುಡದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾಳೆಗಿಡ ಕ್ಯಾಂಪಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಗೊಬ್ಬರಕಲ್ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ರಾಯಚೂರು ತಾಲೂಕಿನಲ್ಲಿ ಐಜಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಶಕ್ತಿನಗರದ ಕೆಪಿಟಿಸಿಲ್ ಡಿಎವಿ ಪಬ್ಲಿಕ್ ಸ್ಕೂಲ್, ದೇವಸೂಗೂರುನ ಸರ್ಕಾರಿ ಪ್ರೌಢ ಶಾಲೆ, ಕೆಇಬಿ ಕಾಲನಿಯ ಲಯನ್ಸ್ ಶಾಲೆ, ಲಿಂಗಸ್ಗೂರು ತಾಲೂಕಿನಲ್ಲಿ ಲಿಂಗಸ್ಗೂರು ನಗರದ ಕೇಂಬ್ರಿಡ್ಜ್ ಪ್ರಾಥಮಿಕ ಶಾಲೆ.
ಆಮದಿಹಾಳದ ಗುರುನಿರುಪಾದೇಶ್ವರ ಪ್ರೌಢ ಶಾಲೆ, ದೇವದುರ್ಗ ತಾಲೂಕಿನಲ್ಲಿ ಗಾಜನದಿನ್ನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪಂದ್ಯಾನ ಬಿ.ಗಣೇಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಚಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೂಲದಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೊನ್ನಕಾಟಮಳ್ಳಿ, ವೀರಗೋಟ ಗ್ರಾಮದ ಶಾಲೆಗಳು ಹಾಗೂ ಮಾನವಿ ತಾಲೂಕಿನಲ್ಲಿ ಜಂಗಮರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮುಚ್ಚಲಗುಡ್ಡ ಕ್ಯಾಂಪ್ ಪರಸಾಪುರ ಗ್ರಾಮದ ಸರ್ಕಾರಿ ಶಾಲೆಗಳು ಪ್ರಶಸ್ತಿಗೆ ಆಯ್ಕೆಯಾಗಿವೆ.
ಈ ಪ್ರಶಸ್ತಿಗಳನ್ನು ಮಾ. 4ರಂದು ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ಪರಿಸರ ಅಧಿಕಾರಿ ಎಸ್.ದಿನೇಶ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

