ಮಾ.27ರಂದು ಅಮರೇಶ್ವರ ಜಾತ್ರೆ
ಲಿಂಗಸ್ಗೂರು: ಮಾ.27ರಂದು ನಡೆಯ ಲಿರುವ ತಾಲೂಕಿನ ಗುರುಗುಂಟಾ ಸುಕ್ಷೇತ್ರ ಅಮರೇಶ್ವರ ದೇವರ ಜಾತ್ರಾ ಮಹೋತ್ಸವ ನಿಮಿತ್ತ ಸಹಾಯಕ ಆಯುಕ್ತ ಕಚೇರಿಯಲ್ಲಿ ಸಹಾಯಕ ಆಯುಕ್ತ ಟಿ. ಯೋಗೇಶ ಅಧ್ಯಕ್ಷತೆಯಲ್ಲಿ ಶನಿವಾರ ಸಂಜೆ ಪೂರ್ವಭಾವಿ ಸಭೆ ಜರುಗಿತು.
ಅಮರೇಶ್ವರ ಜಾತ್ರೆ ಸಂದರ್ಭದಲ್ಲಿ ಜನದಟ್ಟಣೆ, ನೂಕುನುಗ್ಗಲು, ವಾಹನಗಳ ದಟ್ಟಣೆ ನಿಯಂತ್ರಣ ಮತ್ತು ಸಾಂಕ್ರಾಮಿಕ ರೋಗಗಳು ಹರಡುವಿಕೆ ಸೇರಿದಂತೆ ಮುಂತಾದ ಅವಘಡಗಳ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಯಿತು.
ದೇವಸ್ಥಾನಕ್ಕೆ ಸುಣ್ಣ-ಬಣ್ಣ ಬಳಿದು ಸಜ್ಜುಗೊಳಿಸುವುದು. ಅಗತ್ಯ ಕುಡಿವ ನೀರಿನ ವ್ಯವಸ್ಥೆ, ವಾಹನಗಳು ಕ್ರಮಬದ್ಧವಾಗಿ ನಿಲ್ಲಿಸಿ ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳುವುದು. ಬೀದಿ ದೀಪಗಳ ಅಳವಡಿಕೆ ಮತ್ತು ಜಾತ್ರೆಗೆ ಆಗಮಿಸಿದ ವ್ಯಾಪಾರಿ ಅಂಗಡಿಗಳು, ಹೋಟೆಲ್, ಖಾನಾವಳಿ ಸೇರಿದಂತೆ ವಿದ್ಯುತ್ ವ್ಯವಸ್ಥೆ ಕಲ್ಲಿಸುವುದು.
ಜಾತ್ರೆಗೆ ಆಗಮಿಸಿದ ಭಕ್ತರು ಸುಗಮವಾಗಿ ಸಂಚರಿಸಲು ಮತ್ತು ದೇವರ ದರ್ಶನಕ್ಕೆ ಅವಕಾಶ ಕಲ್ಲಿಸುವುದು. ಜಾತ್ರೆಯಲ್ಲಿ ಕಳ್ಳತನ ಸೇರಿದಂತೆ ಇತ್ಯಾದಿ ಪ್ರಕರಣಗಳು ಜರುಗದಂತೆ ಸೂಕ್ತ ಭದ್ರತೆ ಮತ್ತು ಸಿಸಿ ಕ್ಯಾಮರಾ ಅಳವಡಿಸುವುದು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಕೈಗೊಳ್ಳುವ ಕುರಿತು ಸೂಚಿಸಲಾಯಿತು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಎನ್.ಬಿ. ಪಾಟೀಲ್, ಆರೋಗ್ಯಾಧಿಕಾರಿ ಡಾ. ವಿಜಯ ಕುಮಾರ, ಜಿಪಂ ಅಧಿಕಾರಿ ಸಿ.ಎಸ್. ಪಾಟೀಲ್, ಜೆಸ್ಕಾಂ ಇಲಾಖೆ ಅಧಿಕಾರಿ ರಿಯಾಜ್ ಅಹ್ಮದ್, ಪಶು ಸಂಗೋಪನಾ ಇಲಾಖೆ ಅಧಿಕಾರಿ ಡಾ. ರಾಚಪ್ಪ, ಸಿಪಿಐ ಪಂಚಾಕ್ಷರಯ್ಯ, ಪಿಎಸ್‌ಐ ಸಿದ್ಧರಾಮಯ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

