ರಾಯಚೂರು

ಲೋಹಿಯಾ ಸಮಾನತೆ ಪ್ರತಿಪಾದಕ

Published On :

ರಾಯಚೂರು: ಲೋಹಿಯಾ ಅವರು ಆರ್ಥಿಕ ಸಮಾನತೆಯ ಜತೆಗೆ ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸಿದ್ದರು. ಅವರ ಚಿಂತನೆಗಳು ಪ್ರಸ್ತುತ ಮಹತ್ವದ್ದಾಗಿವೆ ಎಂದು ಹೈದ್ರಾಬಾದ್‌ನ ಇಎಫ್‌ಎಲ್ ವಿವಿ ಪ್ರಾಧ್ಯಾಪಕ ಡಾ. ತಾರಕೇಶ್ವರ್ ಹೇಳಿದರು.
ನಗರದಲ್ಲಿ ಶನಿವಾರ ಲೋಹಿಯಾ ಪ್ರತಿಷ್ಠಾನದಿಂದ ಆಯೋಜಿಸಿದ್ದ ಪ್ರಸ್ತುತ ಸಂದರ್ಭದಲ್ಲಿ ಲೋಹಿಯಾ ಚಿಂತನೆಗಳು ಎಂಬ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಗಾಂಧಿ ಮತ್ತು ಮಾರ್ಕ್ಸ್ ಅವರ ಚಿಂತನೆಗಳನ್ನು ಒಟ್ಟಾಗಿ ಲೋಹಿಯಾ ತಂದವರಾಗಿದ್ದಾರೆ. ಗಾಂಧಿ ಗ್ರಾಮ ಸ್ವರಾಜ್ಯಕ್ಕೆ ಮಹತ್ವ ನೀಡಿದರು. ಲೋಹಿಯಾ ಆಧುನಿಕತೆಗೆ ಹೆಚ್ಚಿನ ಮಹತ್ವ ನೀಡಿದ್ದಾರೆಂದು ಹೇಳಿದರು.
ಗಾಂಧೀಜಿ ಅವರ ಶಿಷ್ಯರಾಗಿಯೂ ವಿಭಿನ್ನ ಚಿಂತನಾಧಾರೆಯನ್ನು ಮೈಗೂಡಿಸಿಕೊಂಡಿದ್ದ ಲೋಹಿಯಾ ಅವರು, ರಾಜಕೀಯ ವ್ಯವಸ್ಥೆಗೆ ಹೊಸಸ್ವರೂಪವನ್ನು ಕೊಟ್ಟಿದ್ದಾರೆ. ವಿದ್ಯಾರ್ಥಿಗಳು ಪಠ್ಯಪುಸ್ತಕಕ್ಕೆ ಸೀಮಿತಗೊಳ್ಳಬಾರದು. ಅದರಿಂದ ಜೀವನವನ್ನು ಅರ್ಥೈಸಿಕೊಳ್ಳುವುದು ಅಸಾಧ್ಯ ಎಂದರು.
ಹಂಪಿಯ ಕನ್ನಡ ವಿವಿ ಲೋಹಿಯಾ ಅಧ್ಯಯನ ಪೀಠದ ಸಂಚಾಲಕ ಡಾ.ಶ್ರೀಧರ್ ಮಾತನಾಡಿ, ವಿವಿಯು ಲೋಹಿಯಾ ಅವರ ಚಿಂತನೆಗಳನ್ನು ಜನರ ಬಳಿಗೆ ಕೊಂಡೊಯ್ಯುವ ಕಾರ್ಯ ಮಾಡುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಲೋಹಿಯಾ ಪ್ರತಿಷ್ಠಾನದ ಅಧ್ಯಕ್ಷ ಭೀಮನಗೌಡ ಇಟಗಿ, ಲೋಹಿಯಾರವರು ಸ್ವಾತಂತ್ರ್ಯ ಪೂರ್ವ ಮತ್ತು ನಂತರದಲ್ಲಿ ವ್ಯಕ್ತಿತ್ವ, ಚಿಂತನೆಗಳು, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿಯಿಂದ ದೇಶದ ಗಮನಸೆಳೆದಿದ್ದರು ಎಂದರು.
ಸಹ ಪ್ರಾಧ್ಯಾಪಕ ಪಾಂಡುರಂಗ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.