ರಾಯಚೂರು

ಪ್ಲಾಸ್ಮಾ ಉಚಿತ ನೀಡಿಕೆಗೆ ಸಿದ್ಧ; ದೊರೆಯದ ಸ್ಪಂದನೆ- ಬೇಸರ

Published On :

ರಾಯಚೂರು: ರಕ್ತದ ಭಾಗವಾಗಿರುವ ಪ್ಲಾಸ್ಮಾ ಉಚಿತವಾಗಿ ಕೊಡ್ತೀವಿ. ಪೌಷ್ಟಿಕಾಂಶದ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ನೀಡಿ ಆರೋಗ್ಯ ಸುಧಾರಣೆ ಮಾಡಿ ಎಂಬ ನವೋದಯ ಶಿಕ್ಷಣ ಸಂಸ್ಥೆಯ ಮನವಿಗೆ ಜಿಲ್ಲಾಡಳಿತದ ಸ್ಪಂದನೆ ಮಾತ್ರ ಶೂನ್ಯವೇ ಆಗಿದೆ ಎಂಬುದು ನವೋದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಆರ್. ರೆಡ್ಡಿ ಅವರ ಅಳಲು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನವೋದಯ ಶಿಕ್ಷಣ ಸಂಸ್ಥೆಯಲ್ಲಿ ರಕ್ತದ ಕಣಗಳನ್ನು ಪ್ರತ್ಯೇಕಿಸುವ ಘಟಕ ಸ್ಥಾಪಿಸಲಾಗಿದೆ. ಪ್ಲೇಟ್ಲೆಟ್ಸ್‌ಗಳನ್ನು ಪ್ರತ್ಯೇಕಿಸಿದ ನಂತರ ಭಾರೀ ಪ್ರಮಾಣದಲ್ಲಿ ಪ್ಲಾಸ್ಮಾ ಉಳಿಯುತ್ತಿದೆ. ಅದನ್ನು ಪೌಷ್ಟಿಕಾಂಶದ ಕೊರತೆಯಿರುವ ಮಕ್ಕಳಿಗೆ ನೀಡಿದಲ್ಲಿ ಎರಡೇ ಗಂಟೆಯಲ್ಲಿ ಅಂಥ ಮಕ್ಕಳ ಆರೋಗ್ಯ ಸುಧಾರಣೆ ಕಾಣಲಿದೆ ಎಂದು ತಜ್ಞ ವೈದ್ಯರು ಹೇಳುತ್ತಾರೆ. ಈ ಬಗ್ಗೆ ಜಿಲ್ಲಾಡಳಿತ, ಜಿಪಂ ಸಿಇಒ ಹಾಗೂ ಆರೋಗ್ಯ ಇಲಾಖೆಗೆ ಪತ್ರ ಬರೆಯಲಾಗಿದೆ. ಆದರೆ ಪ್ರತಿಸ್ಪಂದನೆ ಮಾತ್ರ ಇದುವರೆಗೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸದ್ಯ ಆಸ್ಪತ್ರೆಯಲ್ಲಿ 1 ಸಾವಿರ ಬ್ಯಾಗ್‌ಗಳಲ್ಲಿ ಪ್ಲಾಸ್ಮಾ ಸಂಗ್ರಹಿಸಿಡಲಾಗಿದೆ. ನಗರ ಸೇರಿದಂತೆ ಜಿಲ್ಲೆಯ ಯಾವುದೇ ವೈದ್ಯರು ಪೌಷ್ಟಿಕಾಂಶದ ಮಕ್ಕಳಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಹಾಗೂ ಪ್ಲಾಸ್ಮಾ ನೀಡಲು ಬಯಸುವ ತಜ್ಞ ವೈದ್ಯರು ಆಸ್ಪತ್ರೆಯನ್ನು ಸಂಪರ್ಕಿಸುವಂತೆ ಮನವಿ ಮಾಡಿದರು.
ಜಿಲ್ಲೆಯಲ್ಲಿ ಅನೇಕ ಮಕ್ಕಳು ಪೌಷ್ಟಿಕಾಂಶದ ಕೊರತೆಯಿಂದ ಬಳಲುತ್ತಿದ್ದು ಅಂಥವರಿಗೆ ಪ್ಲಾಸ್ಮಾದ ನೀಡಿಕೆ ಪ್ರಯೋಜನಕಾರಿಯಾಗಿದೆ. ಈಗಲಾದರೂ ಜಿಲ್ಲಾಡಳಿತ ತಮ್ಮನ್ನು ಸಂಪರ್ಕಿಸಲಿ ಎಂದು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.