ರೇಪ್ ಗೇಮ್ ನಿಷೇಧಿಸಲು ಕೇಂದ್ರಕ್ಕೆ ಆಗ್ರಹ
ರಾಯಚೂರು: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಕಾರ್ಯದರ್ಶಿ ಸುಜಯ್ ಕುಮಾರ್ ಅವರು ರೇಪ್ ಗೇಮ್ ಎಂಬ ವೀಡಿಯೋ ಗೇಮ್ ನಿಷೇಧಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಮಾಡಿದ ಮನವಿಯನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್ಎಸ್)ನ ಕರ್ನಾಟಕ ರಾಜ್ಯ ಸಮಿತಿ ಸ್ವಾಗತಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯ ಜಿಲ್ಲಾಧ್ಯಕ್ಷೆ ಚೇತನಾ ಬನಾರೆ, ಜಪಾನಿನಲ್ಲಿ ತಯಾರಿಸಿದ ಈ ಆಟದಲ್ಲಿ ಒಬ್ಬ ಮಹಿಳೆ ಮತ್ತು ಅವಳ ಇಬ್ಬರು ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗುವ ಸವಾಲು ಒಡ್ಡುತ್ತದೆ. ಇಂತಹ ಆಟಗಳು, ಮಕ್ಕಳು ಮತ್ತು ಯುವಕರಲ್ಲಿ ಹಿಂಸಾ ಪ್ರವೃತ್ತಿಯನ್ನು ಹೆಚ್ಚಿಸುತ್ತದೆ. ಮಾಹಿತಿ ತಂತ್ರಜ್ಞಾನ ಕಾಯಿದೆಯನ್ನು ಬಳಸಿಕೊಂಡು ಇಂತಹ ಆಟಗಳನ್ನು ನಿಷೇಧಿಸಲು ಒತ್ತಾಯಿಸಿರುವುದು ಮೆಚ್ಚುಗೆಯ ಸಂಗತಿ ಎಂದು ತಿಳಿಸಿದ್ದಾರೆ.
ಮಾಹಿತಿ ತಂತ್ರಜ್ಞಾನ ಕಾಯಿದೆ 2000ರ 67ನೇ ಪರಿಚ್ಛೇದದ ಪ್ರಕಾರ ಇಂತಹ ಆಟಗಳನ್ನು ರೂಪಿಸುವವರಿಗೆ ಕನಿಷ್ಠ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ. ಈ ಆಟವನ್ನು, ಅರ್ಜೆಂಟೈನಾ, ಮಲೇಶಿಯಾ, ಥೈಲ್ಯಾಂಡ್ ಮುಂತಾದ ರಾಷ್ಟ್ರಗಳು ಈಗಾಗಲೇ ನಿಷೇಧಿಸಿವೆ. ಆದರೆ ಭಾರತ ಹಾಗೂ ಇನ್ನಿತರ ಅನೇಕ ದೇಶಗಳಲ್ಲಿ ಇದು ಸುಲಭವಾಗಿ ಹಾಗೂ ಉಚಿತವಾಗಿ ಲಭ್ಯವಿದೆಯೆಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆತಂಕಕಾರಿ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಯುವಜನತೆಯನ್ನು ಅಪರಾಧಿಗಳನ್ನಾಗಿಸುವ ಹಾಗೂ ಮಹಿಳೆಯರ ಮೇಲಿನ ಅಪರಾಧಗಳನ್ನು ಹೆಚ್ಚಿಸುವಂತಹ ಆಟಗಳನ್ನು ನಿಷೇಧಿಸಬೇಕೆಂದು ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

