20ನೇ ವಾರ್ಡ್ಗೆ ಅವಿರೋಧ ಆಯ್ಕೆ
ಲಿಂಗಸ್ಗೂರು: ಸ್ಥಳೀಯ ಪುರಸಭೆ ಚುನಾವಣೆ ಮಾ.7ರಂದು ನಡೆಯಲಿದ್ದು, ಆದರೆ ಕಾಂಗ್ರೆಸ್ ಅಭ್ಯರ್ಥಿ ತಮ್ಮ ನಾಮಪತ್ರ ಹಿಂದಕ್ಕೆ ಪಡೆದ ಪ್ರಯುಕ್ತ ಜೆಡಿಎಸ್ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಗೊಂಡಿದ್ದು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಪುರಸಭೆಯ 20ನೇ ವಾರ್ಡಿಗೆ ಕಾಂಗ್ರೆಸ್ ಬೆಂಬಲಿತ ಕುಪ್ಪಣ್ಣ ಹನುಮಪ್ಪ ಯತಗಲ್ ಹಾಗೂ ಜೆಡಿಎಸ್ ಬೆಂಬಲಿತ ಬಸವರಾಜ ನಾಗಪ್ಪ ಯತಗಲ್ ನಾಮಪತ್ರ ಸಲ್ಲಿಸಿದ್ದರು.
ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಫೆ.27ರಂದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕುಪ್ಪಣ್ಣ ಯತಗಲ್ ನಾಮಪತ್ರ ವಾಪಸ್ ಪಡೆದ ಪ್ರಯುಕ್ತ ಅಂತಿಮವಾಗಿ ಜೆಡಿಎಸ್ ಬೆಂಬಲಿತ ಬಸವರಾಜ ನಾಗಪ್ಪ ಯತಗಲ್ ಉಳಿದಿದ್ದು, 20ನೇ ವಾರ್ಡಿಗೆ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ.
ಸಂಭ್ರಮ: ಪಟ್ಟಣದ ಗಡಿಯಾರ ಚೌಕ್ ವೃತ್ತದಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.
ಮುಖಂಡರಾದ ಗಿರಿಮಲ್ಲನಗೌಡ ಕರಡಕಲ್, ಶರಣಪ್ಪ ಗೋನವಾರ, ಯಮನೂರಪ್ಪ ಭೋವಿ, ದಾದಾಪೀರ, ಸೋಮಲಿಂಗಪ್ಪ, ಶಂಭುಲಿಂಗಪ್ಪ, ಅಬ್ದುಲ್ ವಹಿದ್, ಶಿವಾನಂದ ಐದನಾಳ, ಈರಣ್ಣ ಹುರಕಡ್ಲಿ, ಶಿವಕುಮಾರ, ಹುಲಗಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

