ಅನುಮತಿ ನಿರಾಕರಣೆಗೆ ವಿವಿಧ ಸಂಘಟನೆಗಳಿಂದ ಜಿಲ್ಲಾಡಳಿತಕ್ಕೆ ಒತ್ತಾಯ
ಒವೈಸಿಗೆ ಚುನಾವಣೆ ಪ್ರಚಾರ ಅವಕಾಶ ಬೇಡ
ರಾಯಚೂರು: ಹೈದರಾಬಾದ್ನ ಎಂಐಎಂ ಸಂಘಟನೆಯ ಶಾಸಕ ಅಕ್ಬರುದ್ದೀನ್ ಒವೈಸಿ ಅವರನ್ನು ಚುನಾವಣೆ ಪ್ರಚಾರಕ್ಕಾಗಿ ನಗರಕ್ಕೆ ಕರೆತರುವ ಪ್ರಯತ್ನವನ್ನು ವೀರಸಾವರ್ಕರ್ ಯುವಕ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ತೀವ್ರವಾಗಿ ವಿರೋಧಿಸಿದೆ.
ಈ ಕುರಿತು ಗುರುವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಂಘಟನೆಯವರು, ಹಿಂದೂಗಳ ವಿರುದ್ಧ ಅವಹೇಳನಕಾರಿ ಭಾಷಣ ಮಾಡುವ ಮೂಲಕ ದೇಶದ್ರೋಹದ ಕೆಲಸ ಮಾಡಿದ್ದಾರೆ. ಹಿಂದೂಗಳ ಮನನೋಯಿಸುವ ಕಾರ್ಯ ಮಾಡಿರುವ ಅಕ್ಬರುದ್ದೀನ್ ಒವೈಸಿ ಅವರನ್ನು ಚುನಾವಣೆ ಹಿನ್ನೆಲೆಯಲ್ಲಿ ನಗರಕ್ಕೆ ಕರೆಯಿಸುವ ಪ್ರಯತ್ನವನ್ನು ಕೆಲವರು ನಡೆಸಿದ್ದು ಅಂಥ ಯಾವುದೇ ಪ್ರಯತ್ನಕ್ಕೆ ತೀವ್ರ ವಿರೋಧವಿದೆ ಎಂದು ಆಕ್ಷೇಪಿಸಿದರು.
ಅಶಾಂತಿ ಸಾಧ್ಯತೆ: ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಾಸಕ ಅಕ್ಬರುದ್ದೀನ್ ಒವೈಸಿ ಅವರಿಗೆ ನಗರ ಸೇರಿದಂತೆ ಜಿಲ್ಲೆಯ ಎಲ್ಲಿಯೂ ಪ್ರಚಾರಕ್ಕೆ ಅವಕಾಶ ನೀಡಬಾರದು. ಅಶಾಂತಿ ಉಂಟಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಅವರಿಗೆ ಪ್ರಚಾರ ಮಾಡದಂತೆ ತಡೆಯುವಂತೆ ಒತ್ತಾಯಿಸಿದರು.
ಚುನಾವಣೆ ಪ್ರಚಾರದ ನೆಪದಲ್ಲಿ ಅವರು ವೇದಿಕೆಯಲ್ಲಿ ಭಾಷಣ ಮಾಡಲು ಮುಂದಾದರೆ ತೀವ್ರ ವಿರೋಧ ವ್ಯಕ್ತಪಡಿಸುವುದಾಗಿ ಎಚ್ಚರಿಸಿದ ಸಂಘದವರು, ಈ ವಿಚಾರವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಬೇಕು. ಹಾಗೊಂದು ವೇಳೆ ಶಾಸಕ ಅಕ್ಬರುದ್ದೀನ್ ಒವೈಸಿ ಅವರ ನಗರ ಪ್ರವೇಶಕ್ಕೆ ಅವಕಾಶ ಮಾಡಿದಲ್ಲಿ ಮುಂದಾಗುವ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷ ಪ್ರಶಾಂತಗೌಡ, ಜಿಲ್ಲಾ ಮಾದಿಗ ದಂಡೋರಾದ ಅಧ್ಯಕ್ಷ ನರಸಪ್ಪ ಮಾದಿಗ, ಜಿಲ್ಲಾ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವಸೇನೆಯ ಅಧ್ಯಕ್ಷ ನರೇಂದ್ರ ಪೂಜಾರಿ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರಾದ ಭಾಸ್ಕರಬಾಬು, ಮಹಾದೇವಪ್ಪ, ವಸಂತಕುಮಾರ್, ವೈ.ವೆಂಕಟೇಶ್, ಶ್ರೀಶಾಂತಿ ಬಾಲಿ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

