ಗೆಲವಿಗೆ ಶ್ರಮಿಸಲು ಬ್ಯಾಗವಾಟ್ ಕರೆ
ಸಿಂಧನೂರು: ನಗರಸಭೆ ಚುನಾವಣೆಯಲ್ಲಿ ವಿವಿಧ ವಾರ್ಡ್ಗಳಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳ ಪರ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಪ್ರಚಾರ ಕೈಗೊಳ್ಳುವ ಮೂಲಕ ಬಹುಮತಕ್ಕಾಗಿ ಶ್ರಮಿಸುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ್ ಕರೆ ನೀಡಿದರು.
ನಗರದ ಆದರ್ಶ ಕಾಲೋನಿಯ ಆರ್.ಕೆ.ಟವರ್ಸ್ನಲ್ಲಿ ನಡೆದ ಬಿಜೆಪಿ ಅಭ್ಯರ್ಥಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪಕ್ಷದಲ್ಲಿ ಒಗ್ಗಟ್ಟನ್ನು ಮೂಡಿಸಿ ಈ ಬಾರಿ ಶತಾಯಗತಾಯ ಸಿಂಧನೂರಿನ ನಗರಸಭೆ ಬಿಜೆಪಿ ತೆಕ್ಕೆಗೆ ಹಾಕಿಕೊಳ್ಳಲು ಪಕ್ಷದ ನಾಯಕ ಶಕ್ತಿಮೀರಿ ಪ್ರಯತ್ನಿಸಬೇಕು. ಅಭ್ಯರ್ಥಿಗಳು ಸ್ಥಳೀಯ ನಾಯಕರ ಮಾರ್ಗದರ್ಶನದಲ್ಲಿ ತಮ್ಮ ವಾರ್ಡ್ನ ಮತದಾರರ ಮನಮೊಲಿಸಲು ಮುಂದಾಗಬೇಕೆಂದು ಸಲಹೆ ನೀಡಿದರು. ಮುಖಂಡ ಆರ್. ತಿಮ್ಮಯ್ಯ, ಚುನಾವಣಾ ಸಿದ್ದತೆ ಮತ್ತು ಕ್ಷೇತ್ರದ ಸ್ಥಿತಿಗತಿಯ ಬಗ್ಗೆ ಅಭ್ಯರ್ಥಿಗಳಿಂದ ಮಾಹಿತಿ ಪಡೆದು ಗೆಲುವಿನ ತಂತ್ರಗಳನ್ನು ಹೇಳಿ ಕೊಟ್ಟರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶೇಷಗಿರಿರಾವ್, ತಾಲೂಕ ಅಧ್ಯಕ್ಷ ಅಮರೇಗೌಡ ವಿರುಪಾಪುರ, ನ.ಯೋ.ಪ್ರಾ .ಅಧ್ಯಕ್ಷ ಎನ್.ಶಿವನಗೌಡ ಗೊರೇಬಾಳ, ಉಮೇಶ ಸಜ್ಜನ್, ಈರೇಶ ಇಲ್ಲೂರು ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

