ಎನ್ನೆಸ್ಸೆಸ್ ವಾರ್ಷಿಕ ಶಿಬಿರದಲ್ಲಿ ಇಂದು
ಸಿಂಧನೂರು: ಸರ್ಕಾರಿ ಮಹಾವಿದ್ಯಾಲಯ ಸ್ನಾತಕ ಹಾಗೂ ಸ್ನಾತಕೋತ್ತರ ಕೇಂದ್ರದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಮಲ್ಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ. 22ರಂದು ಸಂಜೆ 4 ಗಂಟೆಗೆ 6ನೇ ಕಾರ್ಯಾಗಾರ ಜರುಗಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥ ನಾಗಣ್ಣ ಕಿಲಾರಿ ವಹಿಸಲಿದ್ದಾರೆ. ಉಪನ್ಯಾಸ ನ್ಯಾಷನಲ್ ಕಾಲೇಜಿನ ಕನ್ನಡ ಉಪನ್ಯಾಸಕ ಗೋವಿಂದರಾಜ ವಿ., ವೆಂಕಟೇಶ್ವರ ಪ್ರೌಢಶಾಲಾ ಶಿಕ್ಷಕ ವೆಂಕನಗೌಡ ವಟಗಲ್ ಸಾಹಿತ್ಯ ಮತ್ತು ಸಮಾಜ ಎಂಬ ವಿಷಯದ ಬಗ್ಗೆ ಉಪನ್ಯಾಸ ಮಂಡಿಸುವರು. ಮುಖ್ಯ ಅತಿಥಿಗಳಾಗಿ ಕಸಾಪ ತಾಲೂಕಾಧ್ಯಕ್ಷ ದೇವೇಂದ್ರಗೌಡ, ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯ ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಸಂಗಯ್ಯ ಹಿರೇಮಠ, ಕನಕದಾಸ ಪಪೂ ಕಾಲೇಜಿನ ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಸುರೇಶ, ಶರಣೇಗೌಡ ಗೊರೇಬಾಳ, ಕೆ.ಶೇಖರಪ್ಪ, ಮಲ್ಲಾಪುರ ಗ್ರಾಪಂ ಮಾಜಿ ಸದಸ್ಯ ಗುಂಡಪ್ಪ, ವೀರಭದ್ರಪ್ಪ, ಭೂ ನ್ಯಾಯ ಮಂಡಳಿ ಮಾಜಿ ಅಧ್ಯಕ್ಷ ಯಮನಪ್ಪ ಸ.ಹಿ.ಪ್ರಾ. ಶಾಲೆಯ ಶಿಕ್ಷಕಿಯರಾದ ಸುಮಾ, ಭಾರತಿ, ಅಂಗನವಾಡಿ ಶಿಕ್ಷಕಿ ಬಸಮ್ಮ ಪಾಲ್ಗೊಳ್ಳುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

