ಜಾತ್ರೆ: ಮದ್ಯ ಮಾರಾಟ ನಿಷೇಧ

Updated on: 

ರಾಯಚೂರು: ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದ ಅಂಬಾದೇವಿ ಜಾತ್ರೆಯ ಅಂಗವಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜ. 26ರಿಂದ ಜ.30ರವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಜ.2 6ರಂದು ಬೆಳಗ್ಗೆ 6ರಿಂದ ಜ.30ರ ಮಧ್ಯರಾತ್ರಿವರೆಗೆ ದೇವಾಲಯದ 8ಕಿಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮಾಡದಂತೆ ಜಿಲ್ಲಾಧಿಕಾರಿ ಎಂ.ವಿ.ಸಾವಿತ್ರಿ ಅವರು ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಈ ಅವಧಿಯಲ್ಲಿ ಮದ್ಯ ಮಾರಾಟದ ಅಂಗಡಿಗಳನ್ನು ಮತ್ತು ಸಗಟು ಹಾಗೂ ಚಿಲ್ಲರೆ ಮದ್ಯ ಮಾರಾಟ ನಿಷೇಧಿಸಿದ್ದು, ಮದ್ಯ ಮಾರಾಟ ಮತ್ತು ಸೇವನೆ ಮಾಡುವುದು ಕಂಡುಬಂದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆದೇಶಿಸಿದ್ದಾರೆ.
---

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com