ರಾಯಚೂರು

ಅಂಬಿಗರ ಚೌಡಯ್ಯ ಆದರ್ಶ ಅಳವಡಿಕೆಗೆ ಸಲಹೆ

Published On :

ದೇವದುರ್ಗ: ಅಂಬಿಗರ ಚೌಡಯ್ಯನವರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಬಿಜೆಪಿ ಮುಖಂಡ ವೆಂಕಟೇಶ್ ಪೂಜಾರಿ ಕರೆ ನೀಡಿದರು.
ಸೋಮವಾರ ಪಟ್ಟಣದಲ್ಲಿ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಅಂಗವಾಗಿ ಗಂಗಾಮತಸ್ಥರ ಸಮಾಜ ಸೇವಾ ಸಂಘ ಹಾಗೂ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, 12ನೇ ಶತಮಾನದಲ್ಲಿ ಎಲ್ಲರೂ ನಮ್ಮವರೇ ಎನ್ನುವ ಮತ್ತು ಜಾತಿ ಪದ್ಧತಿ ಹೋಗಲಾಡಿಸಿದ ಮಹಾಶರಣಲ್ಲಿ ಅಂಬಿಗರ ಚೌಡಯ್ಯನವರೂ ಒಬ್ಬರೆಂದರು.
ಗಂಗಾಮತಸ್ಥರು ತಮ್ಮ ಮಕ್ಕಳಿಗೆ ಶಿಕ್ಷಣಕ್ಕೆ ಹೆಚ್ಚಿನ ಆಸಕ್ತಿ ನೀಡಬೇಕು. ಶಿಕ್ಷಣದಿಂದ ಸಮಾಜದ ಉನ್ನತಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಬಸವಾನಂದ ಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ತಾಪಂ ಅಧ್ಯಕ್ಷ ಪ್ರಭಯ್ಯ ಸ್ವಾಮಿ, ಟಿಎಪಿಎಂಎಸ್ ಅಧ್ಯಕ್ಷ ಶರಣಗೌಡ ಕೊಪ್ಪರ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಶಿವಶಂಕರ ಪಾಟೀಲ್, ಗಂಗಾಮತಸ್ಥರ ಸಮಾಜದ ಅಧ್ಯಕ್ಷ ಜಂಬಣ್ಣ ನೀಲಗಲ್, ಜಿ.ನಾಗಪ್ಪ ಗಿರಣಿ, ರಮೇಶ ಹೊವಿನ ಹೆಡಗಿ, ರಾಘವೇಂದ್ರ ಕೋಲ್ಕರ್, ಸಾಬಯ್ಯ, ಪ್ರಭಾಕರ್, ತಹಸೀಲ್ದಾರ್ ಹಬೀಬುರ್ ರೆಹಮಾನ್, ಸಿಡಿಪಿಓ ವೀರನಗೌಡ, ಅಧಿಕಾರಿ ವರ್ಗ, ಸಮಾಜ ಮುಖಂಡರು ಭಾಗವಹಿಸಿದ್ದರು.

ಮೂಢನಂಬಿಕೆ ವಿರುದ್ಧ ಜಾಗೃತಿ
ರಾಯಚೂರು: ನಗರದ ಕೆಇಬಿ ಕಾಲನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಆದರ್ಶ ವಿದ್ಯಾಲಯದ ಆಶ್ರಯದಲ್ಲಿ ಈಚೆಗೆ ಅಂಬಿಗರ ಚೌಡಯ್ಯ ಜಯಂತಿ   ಆಯೋಜಿಸಲಾಗಿತ್ತು.
ಅಧ್ಯಕ್ಷತೆ ವಹಿಸಿ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಗೌರವ ಸಲ್ಲಿಸಿ ಮಾತನಾಡಿದ ಮುಖ್ಯಗುರು ತಿಮ್ಮಣ್ಣ, ನಿಜಶರಣ ಅಂಬಿಗರ ಚೌಡಯ್ಯ ಅವರು 12ನೇ ಶತಮಾನದಲ್ಲಿಯೇ ಮೂಢನಂಬಿಕೆ ಹೋಗಲಾಡಿಸುವ ಕಾರ್ಯ ಮಾಡಿದ್ದಾರೆ. ತಮ್ಮ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆಂದರು.
ಶಿಕ್ಷಕರಾದ ಗಣೇಶ್, ನಿಂಬವ್ವ, ಮಲ್ಲಪ್ಪ, ನಾಗರತ್ನ, ನವೀನ್ ಸಾಗರ್, ಹನುಮಂತಪ್ಪ  ಪಾಲ್ಗೊಂಡಿದ್ದರು.
---

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.