ರಾಯಚೂರು

ಪೋಲಿಯೋ: ಸಮುದಾಯ ಸಹಕಾರ ಅವಶ್ಯ

Published On :

ದೇವದುರ್ಗ: ಮಕ್ಕಳನ್ನು ಸದೃಢ, ಆರೋಗ್ಯವಂತರಾಗಿ ಬೆಳೆಸುವುದು ಪ್ರತಿಯೊಬ್ಬ ಪಾಲಕರ ಜವಾಬ್ದಾರಿಯಾಗಿದೆಂದು ನಾಗಡದಿನ್ನಿ ಗ್ರಾಪಂ ಮಾಜಿ ಅಧ್ಯಕ್ಷ ಶಿವಕುಮಾರ ಪಾಟೀಲ್ ಹೇಳಿದರು.
 ತಾಲೂಕಿನ ನಾಗಡದಿನ್ನಿ ಗ್ರಾಮದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಆರೋಗ್ಯವಂತ ಮಗು ದೇಶದ ಸಂಪತ್ತು. ಪ್ರತಿ ತಂದೆ ತಾಯಿಯರು ತಮ್ಮ ಐದು ವರ್ಷದೊಳಗಿನ ಮಗುವಿಗೆ ಲಸಿಕೆ ಹಾಕಿಸಿ ಪೋಲಿಯೋ ನಿರ್ಮೂಲನೆಗೆ ಸಹಕರಿಸಲು ಮನವಿ ಮಾಡಿದರು.
  ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಬೂದೆಮ್ಮ ಹೆಗ್ಗಡದಿನ್ನಿ, ಸದಸ್ಯರಾದ ಹನುಮಂತ್ರಾಯ ಬಾಡ್ಲ, ನಬೀಸಾಬ್ ಕಾರ್ಯಕ್ರಮದ ಮೇಲ್ವಿಚಾರಕ ರಮೇಶ ಮಸರಕಲ್, ಸಾಕ್ಷರತಾ ಪ್ರೇರಕ ಕೆ.ಬಂದೇನವಾಜ್ ನಾಗಡದಿನ್ನಿ, ಶರಣಬಸವಸ್ವಾಮಿ, ಅಂಗನವಾಡಿ ಕಾರ್ಯಕರ್ತೆ ದುರುಗಮ್ಮ ನಾಯಕ, ನಿರ್ಮಲಾ ಪಾಟೀಲ್, ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕ ಸಿಬ್ಬಂದಿ ವರ್ಗಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.