ಇಂದು ಕಾಲೇಜು ಕಟ್ಟಡ ಉದ್ಘಾಟನೆ

Updated on: 

ರಾಯಚೂರು: ನಗರದ ಟಾಗೋರ್ ಸ್ಮಾರಕ ಶಿಕ್ಷಣ ಸಂಸ್ಥೆಯ ಸೀತಾ ಸುಬ್ಬರಾಜು ಸ್ಮಾರಕ ಮಹಾವಿದ್ಯಾಲಯ ಮತ್ತು ಟಾಗೋರ ಸ್ಮಾರಕ ಸಂಯುಕ್ತ ಪದವಿ ಮಹಾವಿದ್ಯಾಲಯದ ನೂತನ ಕಟ್ಟಡಗಳ ಉದ್ಘಾಟನೆ ಸಮಾರಂಭ ಜ. 23ರಂದು ನಡೆಯಲಿದೆ.
  ಬೆಳಗ್ಗೆ 10.30ಕ್ಕೆ ರಂಗಮಂದಿರದ ಹತ್ತಿರವಿರುವ ಶಾಲೆಯ ಆವರಣದಲ್ಲಿ ಕಟ್ಟಡಗಳ ಉದ್ಘಾಟನೆಯನ್ನು ಉನ್ನತ ಶಕ್ಷಣ ಸಚಿವ ಸಿ.ಟಿ. ರವಿ ನೆರವೇರಿಸಲಿದ್ದಾರೆ. ಸಾನಿಧ್ಯವನ್ನು ಜಾಲಹಳ್ಳಿ ಮಠದ ವಿದ್ಯಾಮಾನ್ಯ ಶಿವಾಧಿನವ ಶ್ರೀಜಯಶಾಂತೇಶ್ವರ ಶಿವಾಚಾರ್ಯರು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಪಾಪಾರೆಡ್ಡಿ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಸೈಯದ್ ಯಾಸೀನ್, ಜಿಪಂ ಅಧ್ಯಕ್ಷೆ ಲಲಿತಮ್ಮ, ನಗರಸಭೆ ಅಧ್ಯಕ್ಷೆ ಮಮತಾ ಸುಧಾಕರ್, ಎಪಿಎಂಸಿ ಅಧ್ಯಕ್ಷ ಆರ್.ತಿಮ್ಮಯ್ಯ, ಆರ್‌ಡಿಎ ಅಧ್ಯಕ್ಷ ರಾಜಕುಮಾರ್ ಸೇರಿದಂತೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ  ಸದಸ್ಯರು ಹಾಗೂ ಕಾಲೇಜಿನ ವಿದ್ಯಾರ್ಥಿಗಳುಈ ಉದ್ಘಾಟನಾ ಕಾರ್ಯಕ್ರಮದಲ್ಲಿ  ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
30ಕ್ಕೆ ಕೆರಿಯರ್ ಗೈಡೆನ್ಸ್ ಕಾರ್ಯಕ್ರಮ
ರಾಯಚೂರು: ರಾಯಚೂರು ತಾಲೂಕಿನ ವಿದ್ಯಾವಂತ ಯುವಕ- ಯುವತಿಯರಿಗೆ ಹಿಂದುಳಿದ ಪ್ರದೇಶಾಭಿವೃದ್ಧಿ ಅನುದಾನದ ಯೋಜನೆ ಅಡಿ ಜ.30ರಂದು ಕೆರಿಯರ್ ಗೈಡೆನ್ಸ್ ಕಾರ್ಯಕ್ರಮ ಆಯೋಜಿಸಲಾಗಿದೆ. ನಗರದ ರಂಗಮಂದಿರದಲ್ಲಿ ಅಂದು ಕೆರಿಯರ್ ಗೈಡೆನ್ಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತಂತೆ ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಿ ಡಾಕ್ ತರಬೇತಿ ಸಂಸ್ಥೆಯ ಅಧಿಕಾರಿಗಳು, ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com