ಅಲ್ಪಸಂಖ್ಯಾತರ ವಿವಿ ಸ್ಥಾಪನೆಗೆ ಅವಕಾಶ ನೀಡುವುದಿಲ್ಲ: ಸಚಿವ
ರಾಯಚೂರು: ಮೊಹ್ಮದಾಲಿ ಜಿನ್ನಾ ಅವರಂತೆ ದೇಶದ ಏಕತೆಗೆ ಧಕ್ಕೆ ತರುವಂಥ ಆಲೋಚನೆ ಬಿತ್ತುವ ಕೆಲಸ ಮಾಡುವ ವಿವಿಗಳಿಗೆ ರಾಜ್ಯದಲ್ಲಷ್ಟೇ ಅಲ್ಲ ದೇಶದ ಎಲ್ಲಿಯೂ ಅವಕಾಶ ನೀಡಲು ತಮ್ಮ ವಿರೋಧವಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಹೇಳಿದರು.
ನಗರದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಲ್ಪಸಂಖ್ಯಾತರು, ಬಹುಸಂಖ್ಯಾತರು ಎಂಬ ಹೆಸರಿನಲ್ಲಿ ಈಗಾಗಲೇ ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶ ವಿಭಜನೆಯಾಗಿದ್ದು, ಆಗ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ದೇಶದ ಏಕತೆಗೆ ಪುನಾ ಧಕ್ಕೆ ತರುವ ಯಾವುದೇ ಬೆಳವಣಿಗೆಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.
ಅಲ್ಪಸಂಖ್ಯಾತರ ವಿವಿ ಹೆಸರಿನಲ್ಲಿ ಜಿನ್ನಾ ರೀತಿಯಲ್ಲಿ ಯೋಚಿಸುವವರನ್ನು ಹೊರತರಲು ಅವಕಾಶವಿಲ್ಲ. ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿದ್ದರು. ಆದರೆ ಅವರು ಮೈಸೂರು, ಕೊಡಗು ಮತ್ತಿತರೆಡೆ ಹಿಂದೂ ದೇವಾಲಯಗಳಿಗೆ ಹಾನಿಯುಂಟು ಮಾಡಿದ್ದು ಸುಳ್ಳಲ್ಲ. ಹಾಗೆಯೇ ಲಕ್ಷಾಂತರ ಹಿಂದೂಗಳ ಮೇಲೆ ಅವರು ದೌರ್ಜನ್ಯ ನಡೆಸಿದ್ದನ್ನು ಅಲ್ಲಗಳೆಯುವಂತಿಲ್ಲ. ಟಿಪ್ಪು ವಿವಿ ಸ್ಥಾಪನೆ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆಯಿಲ್ಲ. ಸರ್ಕಾರ ಅಂಥ ಪ್ರಸ್ತಾವನೆಗೆ ಅವಕಾಶವನ್ನೂ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

