ರಾಯಚೂರು

ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಪ್ರಾಯೋಗಿಕ ಪತ್ರಿಕೆ ಬಿಡುಗಡೆ

Published On :

ರಾಯಚೂರು: ನಗರದ ಶ್ರೀ ಬಸವ ಸೇವಾ ಪ್ರತಿಷ್ಠಾನದ ಸ್ಪಿಲ್ ಪತ್ರಿಕೋದ್ಯಮ ಕಾಲೇಜಿನ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಹೊರತಂದ ಪತ್ರಿಕೋದ್ಯಮ ವಿದ್ಯಾರ್ಥಿ ಪತ್ರಿಕೆ ಬಿಡುಗಡೆ ಸಮಾರಂಭ ಗುರುವಾರ ಸ್ಪಿಲ್ ಕಾಲೇಜಿನಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಈಶಾನ್ಯ ಟೈಮ್ಸ್ ಪತ್ರಿಕೆಯ ಸಂಪಾದಕ ಎನ್.ನಾಗರಾಜ ಮಾತನಾಡಿ, ಪತ್ರಕರ್ತರು  ಪೂರ್ವಾಗ್ರಹ ಪೀಡಿತರಾಗದೆ ಸಮಾಜದ ಎಲ್ಲ ವರ್ಗಗಳಿಗೆ, ಎಲ್ಲ ಆಯಾಮಗಳಿಗೆ ಒಳಿತನ್ನುಂಟು ಮಾಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು. ನಿವೃತ್ತ ಶಿಕ್ಷಕ ರಾಮಣ್ಣ ಹವಳೆ ಮಾತನಾಡಿ ಪತ್ರಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಉತ್ತಮ ರೀತಿಯಲ್ಲಿ ಬರವಣಿಗೆಯನ್ನು ರೂಢಿಸಿಕೊಂಡು, ಸತತ ಅಧ್ಯಯನದಿಂದ ಯಶಸ್ಸು ಸಾಧಿಸುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಸಮಾರಂಭದಲ್ಲಿ ಸುದ್ದಿಮೂಲ ಪತ್ರಿಕೆಯ ಸಂಪಾದಕ ಹಾಗೂ ಕಾಲೇಜಿನ ಸಂಚಾಲಕ ಬಸವರಾಜಸ್ವಾಮಿ, ಪ್ರಾಚಾರ್ಯ ಅಯ್ಯಪ್ಪ ತುಕ್ಕಾಯಿ, ಆಡಳಿತಾಧಿಕಾರಿ ಧೃವರಾಜ್ ಜೋಷಿ, ಪತ್ರಿಕೋದ್ಯಮ ಉಪನ್ಯಾಸಕರಾದ ಚನ್ನಬಸವಣ್ಣ, ರಾಜ್ಯಶಾಸ್ತ್ರ ಉಪನ್ಯಾಸಕ ಶರಣಪ್ಪ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪತ್ರಿಕೆಯ ಸಂಪಾದಕತ್ವ ವಹಿಸಿದ್ದ ವಿದ್ಯಾರ್ಥಿನಿ ಶಿಲ್ಪಾ ಹಾಗೂ ಉಪ ಸಂಪಾದಕ ವಿಜಯ ಸರೋದೆ ಅನುಭವ ಹಂಚಿಕೊಂಡರು. ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.