ರಾಯಚೂರು

ಪ್ರಾಮಾಣಿಕತೆಯಿದ್ದಲ್ಲಿ ಭ್ರಷ್ಟಾಚಾರ ಇರದು: ಬಾದರ್ಲಿ

Published On :

ಸಿಂಧನೂರು: ರಾಜಕಾರಣಿಗಳು, ಅಧಿಕಾರಿಗಳು ಹಾಗೂ ರೈತರು ಒಂದುಗೂಡಿ ಸಮಾಜದ ಏಳ್ಗೆಯ ಹಿತದೃಷ್ಟಿಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದರೆ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯ ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅಭಿಪ್ರಾಯಪಟ್ಟರು.
ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಸರ್ಕಾರಿ ಪದವಿ ಕಾಲೇಜಿನ ಎನ್ನೆಸ್ಸೆಸ್ ಘಟಕದಿಂದ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ದೇಶದ ಅಭಿವೃದ್ಧಿಗೆ ಎಲ್ಲರೂ ತಮ್ಮದೇ ಆದ ಕೊಡುಗೆ ನೀಡಬೇಕು. ವಿದ್ಯಾರ್ಥಿ ಯುವ ಸಮೂಹ ಸೇವಾ ಮನೋಭಾವನೆಯನ್ನು ರೂಢಿಸಿಕೊಂಡು ಗ್ರಾಮೀಣ ಪ್ರದೇಶಗಳು ಮುನ್ನಡೆ ಸಾಧಿಸಲು ಶ್ರಮಿಸುವಂತೆ ಕರೆ ನೀಡಿದರು.
ಜಾಗೃತಿ: ಕೆಜೆಪಿ ಮುಖಂಡ ರಾಜಶೇಖರ ಪಾಟೀಲ್ ಮಾತನಾಡಿ, ಹಳ್ಳಿಗಳಲ್ಲಿ ನೈರ್ಮಲ್ಯದ ಬಗ್ಗೆ ಜಾಗೃತಿ ಕಡಿಮೆ ಇರುವುದರಿಂದ ಅನೇಕ ರೋಗಗಳು ಜನರನ್ನು ಬಾಧಿಸುತ್ತವೆ. ಎನ್ನೆಸ್ಸೆಸ್ ಶಿಬಿರಗಳು ನೈರ್ಮಲ್ಯದ ಕುರಿತು ಅರಿವು ಮೂಡಿಸುವಲ್ಲಿ ಪೂರಕವಾಗಿವೆ ಎಂದು ಅಭಿಪ್ರಾಯಪಟ್ಟರು.
ನಯೋಪ್ರಾ ಅಧ್ಯಕ್ಷ ಎನ್.ಶಿವನಗೌಡ ಗೊರೇಬಾಳ ಭ್ರಷ್ಟಾಚಾರದ ಕುರಿತು ಮಾತನಾಡಿದರು. ಶಿಬಿರಾಧಿಕಾರಿ ವೆಂಕಟನಾರಾಯಣ ಗ್ರಾಮಸ್ಥರ ನೆರವನ್ನು ಸ್ಮರಿಸಿದರು. ಉಪನ್ಯಾಸಕ ಪರಶುರಾಮ ಮಲ್ಲಾಪೂರ, ಪ್ರಕಾಶ, ಅಲಂಬಾಷಾ ಅನಿಸಿಕೆ ವ್ಯಕ್ತಪಡಿಸಿದರು.
ಜಿಪಂ ಸದಸ್ಯ ಶಿವನಗೌಡ ಎಲೆಕೂಡ್ಲಗಿ, ಮಲ್ಲನಗೌಡ ಕೆ., ಹೇಮರೆಡ್ಡಿ, ಎನ್.ಪಂಪನಗೌಡ, ಪಂಡಿತಯ್ಯ ಶಾಸ್ತ್ರಿ, ಕೆ.ಅಯ್ಯನಗೌಡ ಮತ್ತಿತರರು ಪಾಲ್ಗೊಂಡಿದ್ದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಪ್ರಹ್ಲಾದ ರೆಡ್ಡಿ ವಹಿಸಿದ್ದರು. ಯಾಸ್ಮಿನ್ ಮತ್ತು ಗೀತಾ ಪ್ರಾರ್ಥಿಸಿದರು. ಬಸವರಾಜ ತಡಕಲ್ ಸ್ವಾಗತಿಸಿದರು. ಶಿವಯ್ಯ ಮುಪ್ಪಿನಮಠ ವಂದಿಸಿದರು. ನಂತರ ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.