ರಾಯಚೂರು

ಸಹಬಾಳ್ವೆಗೆ ಧಾರ್ಮಿಕ ಚಟುವಟಿಕೆ: ಪ್ರತಾಪಗೌಡ

Published On :

ಸಿಂಧನೂರು: ಗ್ರಾಮೀಣ ಪ್ರದೇಶದಲ್ಲಿ ಹಮ್ಮಿಕೊಳ್ಳುವ ಧಾರ್ಮಿಕ ಚಟುವಟಿಕೆಗಳಿಂದ ವಿವಿಧ ಸಮುದಾಯಗಳ ಸಹಬಾಳ್ವಗೆ ಪ್ರೇರಕವಾಗುತ್ತವೆ ಎಂದು ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್ ಅಭಿಪ್ರಾಯಪಟ್ಟರು.
ತಾಲೂಕಿನ ರೌಡಕುಂದಾ ಗ್ರಾಮದಲ್ಲಿ ಬುಧವಾರ ಸಿದ್ಧರಾಮ ಶಿವಾಚಾರ್ಯ ಸ್ವಾಮೀಜಿ ಪುಣ್ಯಸ್ಮರಣೋತ್ಸವ ನಿಮಿತ್ತ ಏರ್ಪಡಿಸಿದ್ದ ಉಜ್ಜಯಿನಿ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ನಾಡಿನ ಸಮೃದ್ಧಿಗಾಗಿ ಮತ್ತು ಸಮುದಾಯಗಳ ಉನ್ನತಿಗಾಗಿ ಪ್ರತಿವರ್ಷ ರೌಡಕುಂದಾ ಹಿರೇಮಠ ಸಂಸ್ಥಾನ ಹಮ್ಮಿಕೊಳ್ಳುವ ಧಾರ್ಮಿಕ ಚಟುವಟಿಕೆಗಳು ಮಾದರಿಯಾಗಿವೆ ಎಂದರು.
ನಂದವಾಡಗಿ ಅಂಕಲಿಮಠದ ವೀರಭದ್ರ ಸ್ವಾಮೀಜಿ ಸೇರಿದಂತೆ ನಾಗೇನಹಳ್ಳಿ, ಬಿಚ್ಚಾಲಿ, ಮಾನವಿ, ತೆಕ್ಕಲಕೋಟೆ, ಎಮ್ಮಿಗನೂರು, ಬುಕ್ಕಸಾಗರ, ಮುದೇನೂರು, ನವಲಕಲ್ ಮತ್ತಿತರ ಮಠಾಧೀಶರು ಧರ್ಮ ಸಭೆಯಲ್ಲಿ ಭಾಗವಹಿಸಿದ್ದರು.
ಜಿಪಂ ಅಧ್ಯಕ್ಷೆ ಲಲಿತಮ್ಮ ಲಿಂಗರಾಜ, ತಾಪಂ ಅಧ್ಯಕ್ಷೆ ಬಸಮ್ಮ ಕೊಟ್ರಪ್ಪ, ಸದಸ್ಯರಾದ ಪೂರ್ಣಿಮಾ, ಅನ್ನಪೂರ್ಣಮ್ಮ ರಂಗನಗೌಡ, ಸುವರ್ಣಮ್ಮ ಸಾಹುಕಾರ, ಕರ್ನೂಲ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿಕ್ಕಾರೆಡ್ಡಿ, ಬಿಜೆಪಿ ತಾಲೂಕಾಧ್ಯಕ್ಷ ಅಮರೇಗೌಡ ವಿರುಪಾಪುರ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಚೊಕ್ಕಬಸನಗೌಡ, ಕೆಜೆಪಿ ಮುಖಂಡ ರಾಜಶೇಖರ ಪಾಟೀಲ್, ಸಂಗಯ್ಯಸ್ವಾಮಿ ಸರಗಣಾಧೀಶ್ವರಮಠ, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಎನ್.ಶರಣೇಗೌಡ ಮತ್ತಿತರರು ಇದ್ದರು. ವೈಜನಾಥ ಸಗರಮಠ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.