ಕೇಂದ್ರ ಸಚಿವ ಖರ್ಗೆ, ಸಂಸದ ಧರಂಸಿಂಗ್ಗೆ ಸನ್ಮಾನ- ತಾರತಮ್ಯ ಮಾಡದಂತೆ ನಾಯಕರಿಗೆ ಮನವಿ
ಕಲಂ 371(ಜೆ): 29ರಂದು ಕಾಂಗ್ರೆಸ್ ವಿಜಯೋತ್ಸವ
ರಾಯಚೂರು: ಹೈ-ಕ ಪ್ರದೇಶಕ್ಕೆ ಕಲಂ 371(ಜೆ)ಅಡಿ ವಿಶೇಷ ಸ್ಥಾನಮಾನ ದೊರಕಿಸಿ ಕೊಡುವಲ್ಲಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಂಸದ ಧರಂಸಿಂಗ್ ಅವರ ಕೊಡುಗೆ ಅಪಾರ. ಈ ಹಿನ್ನೆಲೆಯಲ್ಲಿ ಜ. 29ರಂದು ನಗರದಲ್ಲಿ ಇಬ್ಬರೂ ನಾಯಕರಿಗೆ ಸನ್ಮಾನ ಮತ್ತು ವಿಶೇಷ ಸ್ಥಾನಮಾನದ ವಿಜಯೋತ್ಸವ ಸಮಾರಂಭ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಸಂತಕುಮಾರ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಂದು ಮ.3ಕ್ಕೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ. ನಗರದ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕೇಂದ್ರದ ಮೇಲೆ ನಿರಂತರ ಒತ್ತಡ: ಹೈ.ಕ. ಭಾಗದಲ್ಲಿ ಕಳೆದ ಅನೇಕ ದಶಕಗಳಿಂದ ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ ನಡೆದಿತ್ತು. ಆದರೆ ಅದಕ್ಕೆ ಅನುಮೋದನೆ ದೊರೆತಿರಲಿಲ್ಲ. 2009ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಆಯ್ಕೆಯಾಗುತ್ತಿದ್ದಂತೆಯೇ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಧರಂಸಿಂಗ್ ಅವರು ವಿಶೇಷ ಸ್ಥಾನಮಾನ ನೀಡಿಕೆಯ ಕಾರ್ಯಸೂಚಿ ಸಿದ್ಧಪಡಿಸಿಕೊಂಡು ಕೇಂದ್ರದ ಮೇಲೆ ನಿರಂತರ ಒತ್ತಡ ಹೇರಿದರು ಎಂದು ತಿಳಿಸಿದರು.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಈ ಹಿಂದೆ ರಾಜ್ಯಕ್ಕೆ ಭೇಟಿ ನೀಡಿದ ವೇಳೆ 371ನೇ ಕಲಂ ಜಾರಿ ಬಗ್ಗೆ ನೀಡಿದ್ದ ಭರವಸೆಗಳನ್ನು ನಾಯಕರಿಗೆ ಖರ್ಗೆ ಮತ್ತು ಧರಂಸಿಂಗ್ ಅವರು ನೆನಪು ಮಾಡಿಕೊಡುವ ಮೂಲಕ ಸ್ಥಾನಮಾನ ದೊರಕಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ತಿಳಿಸಿದರು.
ಎಲ್ಲ ರಾಜಕೀಯ ಪಕ್ಷಗಳ ಬೆಂಬಲ: ಹೈ.ಕ. ಭಾಗ ವಿಶೇಷ ಸ್ಥಾನಮಾನ ಪಡೆಯುವ ನಿಟ್ಟಿನಲ್ಲಿ ನಡೆದ ಹೋರಾಟದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಬೆಂಬಲಿಸಿದ್ದವು. ಅನೇಕ ಸಂಘಟನೆಗಳೂ ಪಾಲ್ಗೊಂಡಿದ್ದವು. ಅದರ ಜತೆಜತೆಗೆ ಕಾಂಗ್ರೆಸ್ ಹೈ.ಕ. ಭಾಗದ ನಾಯಕರಾದ ಖರ್ಗೆ ಹಾಗೂ ಧರಂಸಿಂಗ್ ಅವರ ಪ್ರಯತ್ನದ ಫಲವಾಗಿ ಹೈ.ಕ. ಭಾಗದ ಜನರ ಬಹುದಿನದ ಕನಸು ನನಾಸುಗುವುದು ಸಾಧ್ಯವಾಗಿದೆ ಎಂದರು.
371ನೇ ಕಲಂ ವಿಶೇಷ ಸ್ಥಾನಮಾನ ದೊರೆತ ನಂತರದಲ್ಲಿ ಹೈ.ಕ. ಭಾಗದಲ್ಲಿ ಸದ್ಯ ಹೆಚ್ಚಿನ ಸಮಸ್ಯೆಗಳನ್ನು ಎದುರಿಸುತ್ತಿರುವ ಹಾಗೂ ಕೊರತೆಯಿರುವ ಪ್ರದೇಶದ ಅಭಿವೃದ್ಧಿಗೆ ಸಾಕಷ್ಟು ಅನುದಾನ ಒದಗಿಸುವಂತೆಯೂ ಮಲ್ಲಿಕಾರ್ಜುನ ಖರ್ಗೆ ಮತ್ತು ಧರಂಸಿಂಗ್ ಅವರನ್ನು ಒತ್ತಾಯಿಸಲಾಗುತ್ತದೆ ಎಂದು ತಿಳಿಸಿದರು.
ನೇಮಕಾತಿ- ಅಧಿವೇಶನದಲ್ಲಿ ಚರ್ಚೆ: ಹೈ.ಕ. ಭಾಗಕ್ಕೆ ಸದ್ಯವಷ್ಟೇ ವಿಶೇಷ ಸ್ಥಾನಮಾನ ದೊರೆತಿದ್ದು ಈ ಕುರಿತ ಕಾನೂನು ಜಾರಿಯಾಗುವವರೆಗೆ ರಾಜ್ಯದಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮುಂದೂಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತದೆ. ಈಗಾಗಲೇ ಹೈ.ಕ. ಭಾಗದ ಎಲ್ಲ ಜಿಲ್ಲೆಗಳ ಕಾಂಗ್ರೆಸ್ ಅಧ್ಯಕ್ಷರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಎಸ್.ಆರ್. ಪಾಟೀಲ್ ಅವರಿಗೆ ಈ ವಿಚಾರ ಮನವರಿಕೆ ಮಾಡಿದ್ದು, ಫೆ. 4ರಿಂದ ನಡೆಯುವ ರಾಜ್ಯ ವಿಧಾನಸಭೆಯ ಅಧಿವೇಶನದಲ್ಲಿ ನಾಯಕರು ವಿಷಯ ಮಂಡಿಸಿ ಚರ್ಚಿಸಲಿದ್ದಾರೆಂದು ತಿಳಿಸಿದರು.
ಚುನಾವಣೆಯಲ್ಲಿ ಲಾಭ ಪಡೆವ ಯತ್ನ: ಕೇಂದ್ರದ ಕಾಂಗ್ರೆಸ್ ಸರ್ಕಾರ ಮುಂಬರುವ ಚುನಾವಣೆಯ ದೃಷ್ಟಿಯಿಂದ ವಿಶೇಷ ಸ್ಥಾನಮಾನಕ್ಕೆ ಅನುಮೋದನೆ ನೀಡಿಲ್ಲ. ಯುಪಿಎ ಸರ್ಕಾರದಲ್ಲಿ ಅನೇಕ ಅಂಗಪಕ್ಷಗಳಿದ್ದು ಎಲ್ಲ ಪಕ್ಷಗಳೂ ಈ ನಿಟ್ಟಿನಲ್ಲಿ ಬೆಂಬಲಿಸಿರುವುದು ಗಮನಾರ್ಹ. ಆದರೆ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ವಿಶೇಷ ಸ್ಥಾನಮಾನ ನೀಡಿಕೆ ಸಾಧ್ಯವಾಗಿರುವುದರಿಂದ ಸಹಜವಾಗಿಯೇ ಇದು ಮುಂದಿನ ಚುನಾವಣೆಯಲ್ಲಿ ಪ್ರಚಾರ ವಸ್ತುವಾಗಲಿದೆ. ಇದರ ಲಾಭ ಪಡೆಯಲು ಕಾಂಗ್ರೆಸ್ ಯತ್ನಿಸಲಿದೆ ಎಂದು ಸ್ಪಷ್ಟಪಡಿಸಿದರು.
ಈ ವೇಳೆ ಪಕ್ಷದ ಪ್ರಮುಖರಾದ ಬಸವರಾಜ ರೆಡ್ಡಿ, ನಗರಸಭೆ ಸದಸ್ಯ ಕೆ.ಶಾಂತಪ್ಪ, ಅಮರೇಗೌಡ ಹಂಚಿನಾಳ, ತಾಯಣ್ಣ ನಾಯಕ ಸೇರಿದಂತೆ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

