ರಾಯಚೂರು: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜ.29ರಂದು ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ಧರಂಸಿಂಗ್ ಅವರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ. ಅಂದು ಮಧ್ಯಾಹ್ನ 3.30ಕ್ಕೆ ನಡೆಯುವ ಸಮಾರಂಭದಲ್ಲಿ ಹೈ.ಕ.ಭಾಗಕ್ಕೆ ವಿಶೇಷ ಸ್ಥಾನಮಾನ ತಂದುಕೊಡುವಲ್ಲಿ ಶ್ರಮಿಸಿದ ನಾಯಕರನ್ನು ಸನ್ಮಾನಿಸಲಾಗುತ್ತಿದ್ದು, ಜಿಲ್ಲೆಯ ನಾಯಕರು ಪಾಲ್ಗೊಳ್ಳಲಿದ್ದಾರೆ.