ಅಭಿವೃದ್ಧಿಯಲ್ಲಿ ಗುಜರಾತ್ ಮುಂಚೂಣಿಯಲ್ಲಿ: ಸಂಸದ
ಮಸ್ಕಿ: ಪಟ್ಟಣದ ವೆಂಕಟೇಶ್ವರ ದೇವಸ್ಥಾನದಲ್ಲಿ ಈಚೇಗೆ ಬಿಜೆಪಿ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿತ್ತು. ಸಮಾವೇಶದಲ್ಲಿ ಮಾತನಾಡಿದ ಕೊಪ್ಪಳ ಸಂಸದ ಶಿವರಾಮೇಗೌಡ ಮಾತನಾಡಿ, ಸಿಎಂ ನರೇಂದ್ರ ಮೋದಿ ಆಡಳಿತದಿಂದಾಗಿ ಗುಜರಾತ್ ರಾಜ್ಯ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ ಎಂದು ಹೇಳಿದರು. ಮುಂಬರುವ ಲೋಕಸಭಾ ಚುನಾವಣೆಗಾಗಿ ಕಾರ್ಯಕರ್ತರು ಈಗಿನಿಂದಲೇ ಗ್ರಾಮ ಮಟ್ಟದಲ್ಲಿ ಸಂಘಟನೆ ಬಲಪಡಿಸುವತ್ತ ಗಮನಹರಿಸಬೇಕು. ಚುನಾವಣೆಯಲ್ಲಿ ಸೋಲು ಗೆಲವು ಸಾಮಾನ್ಯ. ಈಗಾಗಲೇ ಕೇಂದ್ರದಲ್ಲಿನ ಯುಪಿಎ ಮೈತ್ರಿಕೂಟ ಹಲವಾರು ಹಗರಣಗಳಲ್ಲಿ ಸಿಲುಕಿದ್ದು, ಆಡಳಿತ ವೈಫಲ್ಯದಿಂದ ಜನತೆಯಲ್ಲಿ ಭ್ರಮನಿರಸನ ಉಂಟುಮಾಡಿದೆ ಎಂದರು. ವಿಧಾನಪರಿಷತ್ ಸದಸ್ಯ ಹಾಲಪ್ಪಚಾರ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ತಾಲೂಕು ಕೇಂದ್ರಗಳ ಸ್ಥಾಪನೆಗೆ ಕಾಂಗ್ರೆಸ್ ಸರ್ಕಾರ ಮೀನಮೇಷ ಎಣಿಸುವ ಮೂಲಕ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಬಸನಗೌಡ ಬ್ಯಾಗವಾಟ್ ಮಾತನಾಡಿದರು. ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಬ್ಲಾಕ್ ಅಧ್ಯಕ್ಷ ಸ್ಥಾನವನ್ನು ಮಲ್ಲಪ್ಪ ಚಿತ್ತಾಪುರ ಅವರು ಸಂಗಮೇಶ ಹತ್ತಿಗುಡ್ಡ ಅವರಿಗೆ ಹಸ್ತಾಂತರಿಸಿದರು. ಬಿಜೆಪಿಯ ಅಲ್ಪಸಂಖ್ಯಾತರ ಮೋರ್ಚಾದ ರಾಜ್ಯ ಕಾರ್ಯದರ್ಶಿ ಜಹೀರುದ್ದೀನ್ ಸಾಬ್, ಮಸ್ಕಿ ವಿಧಾನಸಭಾ ಕ್ಷೇತ್ರದ ಸಂಚಾಲಕ ಅಮರೇಶ ಹೊಸಮನಿ, ತುರ್ವಿಹಾಳ ಜಿಪಂ ಸದಸ್ಯೆ ಬಸಮ್ಮ ಕುಂಟೋಜಿ, ವಿಶ್ವನಾಥ ಪಾಟೀಲ್, ಶಿವನಗೌಡ ಗೊರೇಬಾಳ, ಶಂಕರ ಮೇದಾರ, ರಮಾನಂದ ಯಾದವ, ಉಮೇಶ ಸಜ್ಜನ್, ಹನುಮೇಶ ವಾಲಿಕಾರ, ಪ್ರಾಣೇಶ ವಕೀಲ, ಅಮರೇಶ, ಆದಪ್ಪ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

