ಸಿಪಿಐನಿಂದ ಜನಾಗ್ರಹ ಚಳವಳಿ
ಕನ್ನಡಪ್ರಭ ವಾರ್ತೆ, ಸಿಂಧನೂರು, ಜು.1
ಭಾರತ ಕಮ್ಯೂನಿಷ್ಟ್ ಪಕ್ಷದ (ಸಿಪಿಐ)ದಿಂದ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ ತಹಸೀಲ್ದಾರ್ ಕಚೇರಿ ಎದುರು ಬಜೆಟ್ ಪೂರ್ವ ಜನಾಗ್ರಹ ಚಳುವಳಿ ನಡೆಸಲಾಯಿತು.
ತಾಲೂಕಿನ ಹೆಚ್ಚುವರಿ ಭೂಮಿ, ಗೋಮಾಳ, ಪಡಾ, ಒತ್ತುವರಿ ಸರ್ಕಾರಿ ಭೂಮಿಯನ್ನು ಕೃಷಿ ಕಾರ್ಮಿಕರಿಗೆ ಹಂಚಬೇಕು. ತಾಲೂಕಿನ ಅಸಂಘಟಿತ ಕಾರ್ಮಿಕರಾದ ಹಮಾಲರು, ಆಟೋರಿಕ್ಷಾ, ಲಾರಿ ಡ್ರೈವರ್ ಹಾಗೂ ಸಹಾಯಕರು, ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರಿಗೆ ನಿವೇಶನ ಕೊಟ್ಟು ಮನೆಗಳನ್ನು ನಿರ್ಮಾಣ ಮಾಡಿ ಕೊಡಬೇಕು. ನಗರದ ಎಲ್ಲಾ ಮುಖ್ಯ ರಸ್ತೆಗಳು ಕೆಟ್ಟುಹೋಗಿ ಚರಂಡಿ ನಿರ್ಮಾಣದ ನೆಪದಿಂದ ಖಾಯಂ ಆಗಿ ಜನ ಧೂಳು ಕುಡಿದು ರೋಗಗಳಿಗೆ ಬಲಿಯಾಗುತ್ತಿದ್ದಾರೆ. ಈ ರಸ್ತೆಗಳನ್ನು ತೀವ್ರವಾಗಿ ದುರಸ್ತಿಗೊಳಿಸಿ ಧೂಳು ರಹಿತವಾಗಿ ರಸ್ತೆಗಳನ್ನು ನಿರ್ಮಿಸಬೇಕು. ಬರಗಾಲ ಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರೊದಗಿಸುವ ಹೊಸ ಯೋಜನೆಗಳನ್ನು ರೂಪಿಸಬೇಕು. ಅರ್ಧಕ್ಕೆ ನಿಂತ ಯೋಜನೆಗಳನ್ನು ಪೂರ್ಣಗೊಳಿಸಲು ಅಗತ್ಯ ಹಣವನ್ನು ಪ್ರತಿವರ್ಷ ಆದ್ಯತೆಯ ಮೇರೆಗೆ ಮಂಜೂರು ಮಾಡಬೇಕು. ಬಜೆಟ್ ಮಂಡನೆಗೂ ಮುನ್ನ ವಾಣಿಜ್ಯೋದ್ಯಮಿಗಳ ಸಭೆ ನಡೆಸುವಂತೆ ರೈತ ಸಂಘಟನೆ ಹಾಗೂ ಕಾರ್ಮಿಕ ಸಂಘಟನೆಗಳ ಪ್ರತ್ಯೇಕ ಸಭೆ ಕೆರದು ಸಲಹೆ ಪಡೆಯಬೇಕೆಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಾಷುಮಿಯಾ ಒತ್ತಾಯಿಸಿದರು.
ಹಮಾಲರ ಸಂಘದ ಗ್ರಾಮಾಂತರ ಕಾರ್ಯದರ್ಶಿ ಚನ್ನಪ್ಪ ಜವಳಗೇರಾ, ಗಂಜ್ ಹಮಾಲರ ಸಂಘದ ಕಾರ್ಯದರ್ಶಿ ಶರಣಪ್ಪ ಗೊರೇಬಾಳ, ಬಾಷಾಸಾಬ ಕಿಡದೂರು, ಹನುಮಂತ ಹಂಚಿನಾಳ, ಹನುಮೇಶ ವೇರ್ ಹೌಸ್ ಇದ್ದರು.
--
ಅರ್ಜಿ ಆಹ್ವಾನ
ರಾಯಚೂರು: ವಾರ್ತಾ ಇಲಾಖೆಯಿಂದ ಹಮ್ಮಿಕೊಂಡಿರುವ ಗ್ರಾಮ ಸಂಪರ್ಕ ಕಾರ್ಯಕ್ರಮಕ್ಕಾಗಿ ಜಿಲ್ಲೆಯಲ್ಲಿನ ಜಾನಪದ ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿಯೊಂದು ಜಾನಪದ ಸಂಗೀತ ತಂಡದಲ್ಲಿ ಕನಿಷ್ಠ ಐವರು ಕಲಾವಿದರಿರಬೇಕು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ತಂಡದ ಮುಖ್ಯಸ್ಥರು, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಇಲಾಖೆ ರಾಯಚೂರು ಇವರನ್ನು ಸಂಪರ್ಕಿಸಿ ಅರ್ಜಿ ಪಡೆದು ಜು.12ರೊಳಗೆ ಸಲ್ಲಿಸಬೇಕು. ತಂಡಗಳಿಂದ ಬಂದ ಅರ್ಜಿಗಳನ್ನು ಪರಿಶೀಲಿಸಿ ಆಯ್ಕೆ ಸಮಿತಿಯ ಮುಂದೆ ಹಾಜರಾಗಿ ಕಾರ್ಯಕ್ರಮ ನೀಡಬೇಕಾಗುತ್ತದೆ. ಆಯ್ಕೆಗಾಗಿ ಬರುವ ಸಂದರ್ಭದಲ್ಲಿ ಕಲಾವಿದರು ತಮ್ಮ ಸ್ವಂತ ಖರ್ಚಿನಲ್ಲಿಯೇ ಬರಬೇಕು. ವಿವರಕ್ಕೆ ವಾರ್ತಾ ಇಲಾಖೆ, ರಾಯಚೂರು ಇವರನ್ನು ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

