ರಾಯಚೂರು

ಕುಡಿವ ನೀರಿನ ಘಟಕ ಉದ್ಘಾಟನೆ

Published On :

ಸಿಂಧನೂರು: ತಾಲೂಕಿನ ಭೂತಲದಿನ್ನಿಯಲ್ಲಿ ಹೈದ್ರಾಬಾದ್‌ನ ಸ್ಮಾರ್ಟ್ ಕಂಪನಿ ಹಾಗೂ ಗ್ರಾಪಂ ಸಂಯುಕ್ತಾಶ್ರಯಲ್ಲಿ 14 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಹಲವಾರು ದಶಕಗಳಿಂದ ಇಲ್ಲಿಯ ಜನತೆ ಫ್ಲೋರೈಡ್‌ಯುಕ್ತ ನೀರನ್ನು ಕುಡಿಯುತ್ತಿದ್ದರು. ಹೈದ್ರಾಬಾದ್‌ನ ಸ್ಮಾರ್ಟ್ ಕಂಪನಿ ಹಾಗೂ ಗ್ರಾಪಂ.ನ ತಲಾ 7 ಲಕ್ಷ ವೆಚ್ಚದಲ್ಲಿ ಶುದ್ಧ ನೀರಿನ ಘಟಕವನ್ನು ನಿರ್ಮಿಸಲಾಗಿದೆ. ಗ್ರಾಮಸ್ಥರಿಗೆ ಕೇವಲ 4ಕ್ಕೆ 20 ಲೀಟರ್ ಶುದ್ಧ ಕುಡಿಯುವ ನೀರು ನೀಡಲಾಗುತ್ತಿದೆ. ಇದರ ನಿರ್ವಹಣೆಯನ್ನು ಸ್ಮಾರ್ಟ್ ಕಂಪನಿಯೇ ನಿಭಾಯಿಸಲಿದೆ ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಬಿ.ಟಿ.ಕುಮಾರಸ್ವಾಮಿ, ತಾಪಂ ಉಪಾಧ್ಯಕ್ಷ ನಾಗಪ್ಪ ಗೋಮರ್ಸಿ, ತಾಪಂ ಇಒ ರಮೇಶ ತಳವಾರ, ಜಿಪಂ ಸದಸ್ಯರಾದ ಚಂದೂಸಾಬ್ ಮುಳ್ಳೂರು, ಶಿವನಗೌಡ ಎಲೆಕೂಡ್ಲಿಗಿ, ಕಾಂಗ್ರೆಸ್ ಮುಖಂಡ ಮಲ್ಲನಗೌಡ ಕನ್ನಾರಿ, ಎಪಿಎಂಸಿ ನಿರ್ದೇಶಕ ಮಲ್ಲನಗೌಡ ಮೇಟಿ, ಗ್ರಾಪಂ ಅಧ್ಯಕ್ಷ ತಿಮ್ಮಪ್ಪ ನಾಯಕ, ಪಿಡಿಒ ನರಸಿಂಹರಾವ್ ಕುಲಕರ್ಣಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.