ಡೊನೇಷನ್ ಹಾವಳಿ ತಡೆಗೆ ಆರ್‌ವೈಎಫ್‌ಐ ಆಗ್ರಹ
ರಾಯಚೂರು: ಡೊನೇಷನ್ ಮತ್ತು ದುಬಾರಿ ಶುಲ್ಕ ರದ್ದಾಗಬೇಕು. ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘನೆ ಮಾಡಿದ ಶಾಲೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆಗ್ರಹಿಸಿ ಭಾರತೀಯ ಕ್ರಾಂತಿಕಾರಿ ಯುವಜನ ಒಕ್ಕೂಟದ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಈ ಕುರಿತು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ ಜಾರಿಗೆ ವಿರೋಧಿಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ನ್ಯಾಯಾಂಗ ತನಿಖೆ ನಡೆಸಬೇಕು. ಅಂಥ ಶಿಕ್ಷಣ ಸಂಸ್ಥೆಗಳ ಕ್ರಿಮಿನಲ್ ಮೊಕದ್ದಮೆ ಹೂಡಿ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಬೇಕು ಎಂದು ಒತ್ತಾಯಿಸಿದರು.
ಖಾಸಗಿ ಮತ್ತು ವಿದೇಶಿ ವಿಶ್ವವಿದ್ಯಾಲಯಗಳನ್ನು ರದ್ದುಪಡಿಸಿ ಭ್ರಷ್ಟಾಚಾರದ ವಿರುದ್ಧ ನ್ಯಾಯಾಂಗ ತನಿಖೆಗೊಳಪಡಿಸಿ, ಖಾಲಿ ಇರುವ ಶಿಕ್ಷಕರ ಮತ್ತು ಉಪನ್ಯಾಸಕರ ಹುದ್ದೆ ಭರ್ತಿ ಮಾಡಬೇಕು. ಕಾರ್ಪೋರೇಟ್ ಶಿಕ್ಷಣದ ವ್ಯವಸ್ಥೆ ತೊಲಗಿಸಬೇಕು ಎಂದು ಆಗ್ರಹಿಸಿದರು.
ವಿದ್ಯಾರ್ಥಿ-ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ, ಅತ್ಯಾಚಾರ, ಮಾನಸಿಕ, ಬೌದ್ಧಿಕ ಕಿರುಕುಳದ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿದ ಕಾರ್ಯಕರ್ತರು, ಗುತ್ತಿಗೆ ಶಿಕ್ಷಕರ ನೇಮಕಾತಿ ಕೈಬಿಡಬೇಕು. ಎಲ್ಲಾ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿನ ಭ್ರಷ್ಟಾಚಾರದ ವಿರುದ್ಧ ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭ ಸಂಘಟನೆಯ ಜಿಲ್ಲಾಧ್ಯಕ್ಷ ಬಸವರಾಜ ಕವಿತಾಳ, ನಾಗರಾಜ್ ಪೂಜಾರ್, ಕೆ. ರವಿಕುಮಾರ್, ರವಿಕುಮಾರ್ ಮಡಿವಾಳ, ಮೌನೇಶ್ ತೋರಣದಿನ್ನಿ, ಅಶೋಕ ತಡಕಲ್, ಮಲ್ಲೇಶ್ ರಾಂಪೂರು, ಆದಿ ನಗನೂರು, ಆನಂದ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

