ರಾಯಚೂರು

ವೇತನ ಹೆಚ್ಚಳಕ್ಕಾಗಿ ನಾಳೆ ಧರಣಿ ಸತ್ಯಾಗ್ರಹ

Published On :

ಸಿಂಧನೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕ್ರಮವಾಗಿ 10 ಸಾವಿರ ಮತ್ತು 5 ಸಾವಿರ ವೇತನ ನೀಡಲು ಆಗ್ರಹಿಸಿ ರಾಜ್ಯಾದ್ಯಂತ ಚಳವಳಿ ಹಮ್ಮಿಕೊಂಡಿದ್ದು ಅದರ ಅಂಗವಾಗಿ ಜು. 5ರಂದು ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರ ಫೆಡರೇಷನ್ ತಾಲೂಕು ಅಧ್ಯಕ್ಷೆ ಗಿರಿಜಮ್ಮ, ಕಾರ್ಯದರ್ಶಿ ಸರಸ್ವತಿ, ರಾಜ್ಯ ಸಮಿತಿ ಸದಸ್ಯೆ ಪ್ರಭಾವತಿ ತಿಳಿಸಿದ್ದಾರೆ.
ಈ ಕುರಿತು ಬುಧವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ರಾಜ್ಯ ಸರ್ಕಾರ ಬಜೆಟ್ ಮಂಡಿಸಲು ತಯಾರಿ ನಡೆಸಿದ್ದು ವೇತನ ಹೆಚ್ಚಳದ ವಿಷಯವನ್ನು ಬಜೆಟ್‌ನಲ್ಲಿ ಘೋಷಿಸಬೇಕು. ಪ್ರಸ್ತುತ ಕಾರ್ಯಕರ್ತೆಯರಿಗೆ 4,500 ಮತ್ತು ಸಹಾಯಕಿಯರಿಗೆ 2,250 ವೇತನ ಕೊಡುತ್ತಿದ್ದು ಜೀವನ ನಿರ್ವಹಣೆ ತುಂಬಾ ಕಷ್ಟವಾಗಿದೆ. ಇಎಸ್‌ಐ ಹಾಗೂ ಭವಿಷ್ಯ ನಿಧಿ, ವೈದ್ಯ ವಿಮೆ ಸೌಲಭ್ಯಗಳನ್ನು ಒದಗಿಸಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಸಹಾಯಕಿಯರನ್ನು ನೇಮಿಸಬೇಕು. ಪ್ರಯಾಣ ಭತ್ಯೆ ಹೆಚ್ಚಿಸುವುದು. ನಿಗದಿತ ದಿನಾಂಕದಂದು ವೇತನ ನೀಡಬೇಕು. 10 ವರ್ಷ ಮತ್ತು 5 ವರ್ಷ ಕೆಲಸ ನಿರ್ವಹಿಸಿದ ಕಾರ್ಯಕರ್ತೆಯರಿಗೆ ಬಡ್ತಿ ನೀಡಬೇಕು. ಭಾಗ್ಯಲಕ್ಷ್ಮೀ ಬಾಂಡ್ ವಿತರಣೆಯ ದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಲು ತೀರ್ಮಾನಿಸಿದ್ದು ಜು.5ರಂದು ನಡೆಯುವ ಚಳವಳಿಯಲ್ಲಿ ಎಲ್ಲ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.