ಸಂಕ್ಷಿಪ್ತ ಸುದ್ದಿ
ಮಟಕಾ: ಒಬ್ಬನ ಬಂಧನ
ರಾಯಚೂರು: ಸಿಂಧನೂರು ನಗರದ ಕೆಇಬಿ ಕಚೇರಿ ಬಳಿ ಮಟಕಾ ಚೀಟಿ ಬರೆಯುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೃಷ್ಣಾ ಎಂದು ಗುರುತಿಸಲಾಗಿದೆ. ಈತ ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಅವನಿಂದ ನಗದು 1,300 ಜಪ್ತಿ ಮಾಡಿದ್ದಾರೆ. ಸಿಂಧನೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಸ್ಪೀಟ್: 6 ಜನ ಬಂಧನ
ರಾಯಚೂರು: ಲಿಂಗಸ್ಗೂರು ತಾಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ಇಸ್ಪೀಟ್ ಆಡುತ್ತಿದ್ದ ಆರು ಜನರನ್ನು ಬಂಧಿಸಿದ್ದಾರೆ.ಬಂಧಿತರನ್ನು ಅಮರಪ್ಪ ಮತ್ತಿತರೆ ಐವರೆಂದು ಗುರುತಿಸಲಾಗಿದೆ. ಇವರು ಗ್ರಾಮದಲ್ಲಿ ಇಸ್ಪೀಟ್ ಆಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರಿಂದ ನಗದು 820 ಜಪ್ತಿ ಮಾಡಲಾಗಿದೆ. ಮುದಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾಖಲಾತಿ ದಿನಾಂಕ ವಿಸ್ತರಣೆ
ರಾಯಚೂರು: ಪ್ರಸಕ್ತ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ದಾಖಲಾತಿ ಪಡೆಯಲು ಅವಧಿ ವಿಸ್ತರಿಸಲಾಗಿದೆ. ದಂಡ ಶುಲ್ಕ ಮತ್ತು ವಿಶೇಷ ದಂಡ ಶುಲ್ಕದೊಂದಿಗೆ ಜು.10 ರವರೆಗೆ ವಿಸ್ತರಿಸಲಾಗಿದೆ ಎಂದು ಪದವಿ ಪೂರ್ವಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
ಭೂ ಖರೀದಿ ಅಕ್ರಮ ತನಿಖೆಗೆ ಆಗ್ರಹ
ದೇವದುರ್ಗ: ತಾಲೂಕಿನ ಗಾಜಲದಿನ್ನಿ ಗ್ರಾಮದಲ್ಲಿ ಆಶ್ರಯ ಯೋಜನೆ ಅಡಿ ಭೂ ಖರೀದಿಯಲ್ಲಿ ಅಕ್ರಮ ನಡೆದಿದ್ದು, ಅದರಲ್ಲಿ ಶಾಮೀಲಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ನ ರೈತ ಮೋರ್ಚಾ ಒತ್ತಾಯಿಸಿದೆ. ಜೆಡಿಎಸ್ ರೈತ ಮೋರ್ಚಾದ ತಾಲೂಕು ಅಧ್ಯಕ್ಷ ಬಸವರಾಜ ನಾಯಕ ಈ ಕುರಿತು ಪ್ರಕಟಣೆ ನೀಡಿ, ಜು.15ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಂಕೇತಿಕ ಧರಣಿ ನಡೆಸಲಾಗುತ್ತದೆ. ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ ತಹಸೀಲ್ದಾರ್, ತಾಪಂ ಇಒ ಸೇರಿ ಇನ್ನಿತರೆ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ.
10ರಂದು ಸಭೆ
ರಾಯಚೂರು: ಇಲ್ಲಿನ ತಾಪಂ 7ನೇ ಸಾಮಾನ್ಯ ಸಭೆಯನ್ನು ಜು.10ರಂದು ಕರೆಯಲಾಗಿದೆ. ಅಂದು ಬೆಳಗ್ಗೆ 10.30ಕ್ಕೆ ನಗರದ ತಾಪಂ ಸಭಾಂಗಣದಲ್ಲಿ ತಾಪಂ ಅಧ್ಯಕ್ಷ ಪಿ. ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಹಾಜರಿರಬೇಕು. ಜು.5ರೊಳಗೆ ಜೂನ್ ತಿಂಗಳಾಂತ್ಯದವರೆಗಿನ ವರದಿಯನ್ನು ಸಲ್ಲಿಸುವಂತೆ ತಾಪಂ ಪ್ರಕಟಣೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

