ಗಬ್ಬೂರು; 7ರಂದು ಪುಣ್ಯಾರಾಧನೆ
ದೇವದುರ್ಗ: ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಜು.7ರಂದು ಲಿಂ. ಶಾಂತಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳ 14ನೇ ಪುಣ್ಯಾರಾಧನೆ ಮತ್ತು 173ನೇ ಶಿವಾನುಭವಗೋಷ್ಠಿ ಹಾಗೂ ನೂತನ ಶಾಸಕರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 6ಕ್ಕೆ ಗ್ರಾಮದ ಬೂದಿಬಸವೇಶ್ವರ ಸಂಸ್ಥಾನ ಮಠದಲ್ಲಿ ಲಿಂ. ಶ್ರೀಶಾಂತಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳ 14ನೇ ಪುಣ್ಯಾರಾಧನೆ ಅಂಗವಾಗಿ ಗದ್ದುಗೆಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾ ಮಂಗಳಾರತಿ, ಭೂರಿ ಗಣಾರಾಧನೆ ನಡೆಯಲಿದೆ. ನಂತರ ಬೂದಿಬಸವೇಶ್ವರ ಶಿವಾಚಾರ್ಯರ ಅಧ್ಯಕ್ಷತೆಯಲ್ಲಿ 173ನೇ ಶಿವಾನುಭವಗೋಷ್ಠಿ ನಡೆಯಲಿದ್ದು, ಸಾನ್ನಿಧ್ಯವನ್ನು ವಿವಿಧ ಮಠಗಳ ಮಠಾಧೀಶರು ವಹಿಸಲಿದ್ದಾರೆ. ಬೀದರ್ನ ಡಾ. ರಾಜಶೇಖರ್ ಸ್ವಾಮೀಜಿ ಅವರು ಶಿವಾನುಭವ ಚಿಂತನೆ ನಡೆಸಲಿದ್ದಾರೆ. ನೂತನ ಶಾಸಕರಾದ ವೆಂಕಟೇಶ ನಾಯಕ, ಹಂಪನಗೌಡ ಬಾದರ್ಲಿ, ಡಾ. ಶಿವರಾಜ ಪಾಟೀಲ್, ಪ್ರತಾಪಗೌಡ ಪಾಟೀಲ್, ತಿಪ್ಪರಾಜು ಹವಾಲ್ದಾರ್, ಮಾನಪ್ಪ ವಜ್ಜಲ್, ಡಾ. ಎ.ಬಿ. ಮಾಲಕರೆಡ್ಡಿ, ರಾಜಾವೆಂಕಟಪ್ಪ ನಾಯಕ ಸೇರಿದಂತೆ ಅನೇಕರಿಗೆ ಸನ್ಮಾನವನ್ನು ಶ್ರೀಮಠದಿಂದ ಆಯೋಜಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

