ಪ.ಜಾ. ರಾಷ್ಟ್ರೀಯ ಆಯೋಗಕ್ಕೆ ಮನವಿ
ಕನ್ನಡಪ್ರಭ ವಾರ್ತೆ, ಸಿಂಧನೂರು, ಜು.4
ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಜರುಗಿದ ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ಸಿಂಧನೂರಿನ ಮಾದಿಗ ಮತ್ತು ಛಲವಾದಿ ಸಮಾಜದ ಮುಖಂಡರು ತೆರಳಿ ಲಂಬಾಣಿ, ಬಂಜಾರ, ಭೋವಿ, ಕೊರಚ, ಕೊರಮ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ತೆಗೆಯಬೇಕೆಂದು ಒತ್ತಾಯಿಸಿ ಪರಿಶಿಷ್ಟ ಜಾತಿಗಳ ರಾಷ್ಟೀಯ ಆಯೋಗಕ್ಕೆ ಮನವಿ ಪತ್ರ ಸಲ್ಲಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಮಾದಿಗ ಸಮಾಜದ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಶೇಖರಪ್ಪ ಗಿಣಿವಾರ ಮತ್ತು ಛಲವಾದಿ ಸಮಾಜದ ಮುಖಂಡರು ಸುಮಾರು 300ಕ್ಕೂ ಹೆಚ್ಚು ಜನ ಬೆಂಗಳೂರಿಗೆ ತೆರಳಿ ಆಯೋಗದ ಅಧ್ಯಕ್ಷರಾದ ಡಾ. ಪಿ.ಎಲ್. ಪೂರಿಯಾ ಅವರಿಗೆ ಮನವಿ ಸಲ್ಲಿಸಿ, ಸಮಾಜದಲ್ಲಿ ಐದು ಸ್ಪಶ್ಯ ಜಾತಿಗಳಾದ ಲಂಬಾಣಿ, ಬಂಜಾರ, ಕೊರಮ, ಕೊರಚ, ಭೋವಿ ಜಾತಿಗಳವರು ಸರ್ಕಾರದಿಂದ ಎಲ್ಲಾ ಸೌಲಭ್ಯಗಳನ್ನು ಪಡೆದಿರುತ್ತಾರೆ. ಆದರೆ ಅಸ್ಪೃಶ್ಯ ಜಾತಿಗಳಾದ ಮಾದಿಗ ಮತ್ತು ಚಲುವಾದಿ ಜನಾಂಗದವರನ್ನು ಇವತ್ತಿಗೂ ಕೆಲ ಹೋಟೆಲ್, ದೇವಸ್ಥಾನ, ಕುಡಿವ ನೀರಿನ ಕೆರೆಗಳಿಗೆ ಪ್ರವೇಶ ನೀಡುತ್ತಿಲ್ಲ. ಸರ್ಕಾರದಿಂದ ಸೌಲಭ್ಯ ಪಡೆದುಕೊಂಡ ಜಾತಿಗಳನ್ನು ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ತೆಗೆದು ಹಾಕಬೇಕೆಂದು ಮನವಿ ಮಾಡಿದ್ದಾಗಿ ಶೇಖರಪ್ಪ ಗಿಣಿವಾರ ತಿಳಿಸಿದ್ದಾರೆ.
ಬೆಂಗಳೂರಿಗೆ ಹೋದ ನಿಯೋಗದಲ್ಲಿ ಮುಖಂಡರಾದ ಸುಭಾಸಫ್ರಾಂಕ್ಲಿನ್, ಹನುಮಂತಪ್ಪ ಮುದ್ದಾಪುರ, ವೀರಭದ್ರಪ್ಪ ಮಲ್ಲಾಪುರ, ಆರ್. ಅಂಬ್ರೂಸ್, ಹುಲಿಗೆಪ್ಪ ಬಡಿಗೇರ, ಯಮನಪ್ಪ ಮಲ್ಲಾಪುರ, ಮಹಾದೇವ ದುಮತಿ, ಶರಣಪ್ಪ ಗೋಮರ್ಸಿ, ಹನುಮಂತಪ್ಪ ಗೋಮರ್ಸಿ, ನಾಗರಾಜ ಸುಕಾಲಪೇಟೆ, ಶರಣಪ್ಪ ಗಿಣಿವಾರ, ಅಯ್ಯಪ್ಪ ಮಲ್ಲಾಪುರ ಮತ್ತಿತರರು ಆಗಮಿಸಿದ್ದರು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

