ರಾಯಚೂರು

ಆರ್ಸೆನಿಕ್ ಸಮಸ್ಯೆ ನಿರ್ವಹಣೆ ವೈಫಲ್ಯ: ಡಿಸಿ ಅಸಮಾಧಾನ

Published On :

ರಾಯಚೂರು: ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ಅಸಮರ್ಪಕ ಕಾರ್ಯನಿರ್ವಹಣೆಯಿಂದಾಗಿ ಸಚಿವರ ಆದೇಶ ಪಾಲನೆಯಲ್ಲಿ ಸೋತಿರುವ ಜಿಲ್ಲಾ ಪಂಚಾಯಿತಿ ಆಡಳಿತದ ಕಾರ್ಯವೈಖರಿಗೆ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು.
ನಗರದಲ್ಲಿ ಶುಕ್ರವಾರ ಸಂಜೆ ಸುದ್ದಿಗೋಷ್ಠಿ ವೇಳೆ ಜಿಪಂ ಸಿಇಒ ಜ್ಞಾನಪ್ರಕಾಶ್ ಅವರು ಜಿಪಂ ಅಧಿಕಾರಿಗಳ ವೈಫಲ್ಯದ ಬಗ್ಗೆ ವಿವರಿಸಿ ಮುಂದಿನ ದಿನಗಳಲ್ಲಿ ಲೋಪಕ್ಕೆ ಅವಕಾಶ ನೀಡುವುದಿಲ್ಲ. ತಪ್ಪಾದರೆ ಸ್ವಯಂ ಹೊಣೆ ಹೊರುವ ಬಗ್ಗೆ ಸ್ಪಷ್ಟನೆ ನೀಡಿದರು.
ಹಿನ್ನಡೆಗೇನು ಕಾರಣ?: ಈ ವೇಳೆ ಮಧ್ಯಪ್ರವೇಶಿಸಿದ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಅವರು, ಆರ್ಸೆನಿಕ್‌ಯುಕ್ತ ನೀರು ಪೂರೈಕೆಯಾಗುತ್ತಿರುವ ಗ್ರಾಮಗಳಲ್ಲಿ ಸಮಸ್ಯೆ ನಿರ್ವಹಣೆಗೆ ಯೋಜನಾಬದ್ಧ ಕಾರ್ಯನಿರ್ವಹಣೆಯ ವೈಫಲ್ಯವೇ ಸಚಿವರ ಆದೇಶ ಪಾಲನೆಯಲ್ಲಿ ಹಿನ್ನಡೆಗೆ ಕಾರಣ ಎಂದು ಹೇಳಿದರು.
ಅಷ್ಟೇ ಅಲ್ಲ, ತಾಲೂಕುವಾರು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದಲ್ಲಿ ಇಂಥ ಸಮಸ್ಯೆಯೇ ಉದ್ಭವವಾಗುತ್ತಿರಲಿಲ್ಲ ಎಂದು ಸಲಹೆ ನೀಡಿದ ಅವರು, ಕೆಳಹಂತದ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿಯೇ ಲೋಪ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಧಿಕಾರಿಗಳಿಗೆ ಇಚ್ಛಾಶಕ್ತಿ ಅಗತ್ಯ. ಮೇಲಧಿಕಾರಿಗಳು ಕಾರ್ಯನಿರ್ವಹಿಸಿದರೆ ಸಾಲದು, ಕೆಳಹಂತದ ಅಧಿಕಾರಿಗಳಿಗೂ ಹೊಣೆಗಾರಿಕೆ ವಹಿಸಬೇಕೆಂದು ತಿಳಿ ಹೇಳಿದ ಅವರು, ಜಿಪಂ ಎಂಜಿನಿಯರಿಂಗ್ ವಿಭಾಗದ ವೈಫಲ್ಯಕ್ಕೆ ತರಾಟೆಗೆ ತೆಗೆದುಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.