ರಾಯಚೂರು

ಪ್ರತಿಭಾನ್ವೇಷಣೆಯಲ್ಲಿ ವಿ.ಜೆ. ಎಂಟರ್‌ಟೇನ್‌ಮೆಂಟ್ ಸಂಸ್ಥೆ

Published On :

ಕನ್ನಡಪ್ರಭ ವಾರ್ತೆ  ರಾಯಚೂರು  ಜು.5
ಯುವ ಜನತೆ ಮತ್ತು ವಿದ್ಯಾರ್ಥಿಗಳಲ್ಲಿನ ಪ್ರತಿಭೆಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಆ.10. 11ರಂದು ನಗರದಲ್ಲಿ ಯುವಜನೋತ್ಸವವನ್ನು ಆಯೋಜಿಸಲಾಗಿದೆ ಎಂದು ವಿ.ಜೆ. ಎಂಟರ್‌ಟೇನ್‌ಮೆಂಟ್ ಇಂಟರ್ ನ್ಯಾಷನಲ್ ಸಂಸ್ಥೆಯ ಮುಖ್ಯಸ್ಥ ವೀರೇಂದ್ರ ಜಲ್ದಾರ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಸ್ಥೆಯು ಕಳೆದ ಅನೇಕ ವರ್ಷಗಳಿಂದ ಮನೋರಂಜನೆ ಕ್ಷೇತ್ರದಲ್ಲಿ ಹೆಸರು ಮಾಡಿದೆ. ಕನ್ನಡ ಚಿತ್ರರಂಗದ ತಾರೆಗಳಾದ ವಿಜಯ ರಾಘವೇಂದ್ರ, ಡೈಸಿ ಬೋಪಣ್ಣ ಮತ್ತಿತರರ ಕಲಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ ಖ್ಯಾತಿಯಿದೆ ಎಂದು ತಿಳಿಸಿದರು.
ಪ್ರತಿಭೆ ಗುರುತಿಸಲು ಆಯೋಜನೆ: ರಾಯಚೂರು ಜಿಲ್ಲೆ ಸೇರಿ ರಾಜ್ಯಾದ್ಯಂತ ಪ್ರತಿಭಾವಂತರ ಹುಡುಕಾಟದಲ್ಲಿರುವ ಸಂಸ್ಥೆಯು ಪೂರ್ವಭಾವಿಯಾಗಿ ಪ್ರತಿಭೆಗಳನ್ನು ಗುರುತಿಸಲು ಸಂಗೀತ, ಕ್ರೀಡಾಲೋಕ ಮತ್ತಿತರೆ ವಿಭಾಗಗಳಲ್ಲಿ ವಿವಿಧ ಸ್ಪರ್ಧೆ ಆಯೋಜಿಸಿದೆ ಎಂದು ತಿಳಿಸಿದರು.
ನಗರದ ರಂಗಮಂದಿರದಲ್ಲಿ ಈ ಸ್ಪರ್ಧೆಗಳನ್ನು ಆಯೋಜಿಸಿದ್ದು, ಭಾವಗೀತೆ, ಚಲನಚಿತ್ರ ಗೀತೆಗಳು ಸೇರಿದಂತೆ ವಿವಿಧ ಸಂಗೀತದ ಪ್ರಕಾರಗಳಲ್ಲಿ ಪ್ರತಿಭಾ ಪ್ರದರ್ಶನಕ್ಕೆ ಅವಕಾಶವಿದೆ. ಅದೇ ರೀತಿ ಮ್ಯಾರಾಥಾನ್ ಮತ್ತು ಸೈಕ್ಲಿಂಗ್‌ನಲ್ಲಿಯೂ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಭವಿಷ್ಯದಲ್ಲಿ ಉತ್ತಮ ಅವಕಾಶ: ಈ ಸ್ಪರ್ಧೆಗಳ ವಿಜೇತರಿಗೆ ಮುಂದಿನ ದಿನಗಳಲ್ಲಿ ಸಂಸ್ಥೆಯು ಆಯೋಜಿಸುವ ಗ್ರ್ಯಾಂಡ್ ಫಿನಾಲೆಯಲ್ಲಿ ಬೆಳ್ಳಿತೆರೆ ಮತ್ತು ಕಿರುತೆರೆ ಕಲಾವಿದರ ಸಮ್ಮುಖದಲ್ಲಿ ಕಾರ್ಯಕ್ರಮ ಪ್ರಸ್ತುತಪಡಿಸುವ ಅವಕಾಶ ಕಲ್ಪಿಸಲಾಗುತ್ತದೆ ಎಂದ ಅವರು, ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಅತೀ ಹೆಚ್ಚಿನ ಅಂಕ ಗಳಿಸಿದ ಪ್ರತಿಭಾವಂತರನ್ನು ಈ ವೇಳೆ ಸನ್ಮಾನಿಸಲಾಗುತ್ತದೆ ಎಂದು ಹೇಳಿದರು.
ವಿ.ಜೆ. ಎಂಟರ್‌ಟೇನ್‌ಮೆಂಟ್ ಇಂಟರ್ ನ್ಯಾಷನಲ್ ಸಂಸ್ಥೆಯ ಕಚೇರಿಯನ್ನು ನಗರದ ಬಿಆರ್‌ಬಿ ವೃತ್ತದ ಬಳಿ ಆರಂಭಿಸಿದ್ದು, ಆಸಕ್ತರು ಕಚೇರಿಗೆ ಆಗಮಿಸಿ ತಮ್ಮ ಪ್ರತಿಭೆ ಪ್ರದರ್ಶಿಸುವ ಮೂಲಕ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.