ರಸ್ತೆ ಅಗಲೀಕರಣಕ್ಕೆ ವಿರೋಧ: ಸಂಘಟನೆ ಪ್ರತಿಭಟನೆ
ರಾಯಚೂರು: ತಾಲೂಕಿನ ಮಮದಾಪುರ ಗ್ರಾಮದಲ್ಲಿ ರಸ್ತೆ ಅಗಲೀಕರಣಕ್ಕೆ ವಿರೋಧಿಸಿ ರೈತ ಕೃಷಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಜಿಪಂ ಸಿಇಒಗೆ ಮನವಿ ಸಲ್ಲಿಸಿ, ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆ ಅಡಿ ತಾಲೂಕಿನ ಶ್ರೀನಿವಾಸಕ್ಯಾಂಪಿನಿಂದ ದಿನ್ನಿ ರಸ್ತೆಯವರೆಗೆ ಮಮದಾಪುರ ಗ್ರಾಮದ ಮೂಲಕ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ.
ಮಮದಾಪುರ ಗ್ರಾಮದಲ್ಲಿ ಈ ನೂತನ ರಸ್ತೆ ಸಾಗುವ ದಾರಿಯ ಇಕ್ಕೆಲಗಳಲ್ಲಿ ಬಡ ರೈತರ ಮನೆಗಳಿದ್ದು, ಅವುಗಳು ರಸ್ತೆ ಅಗಲೀಕರಣದ ಭೀತಿಯಲ್ಲಿ ಸಿಲುಕಿವೆ ಎಂದು ದೂರಿದರು. ಈ ವೇಳೆ ಮನವಿ ಸ್ವೀಕರಿಸಿದ ಜಿಪಂ ಸಿಇಒ ಜ್ಞಾನಪ್ರಕಾಶ್ ಅವರು ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಅನುಷ್ಠಾನಾಧಿಕಾರಿಗಳನ್ನು ಸಂಪರ್ಕಿಸಿ ಗ್ರಾಮದಲ್ಲಿ ಮನೆಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಲು ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ರಾಮಣ್ಣ, ಸದಸ್ಯರಾದ ವೈ.ಪಿ. ಸಾಗರ್, ಗ್ರಾಮಸ್ಥರಾದ ಮಹಾದೇವಪ್ಪ, ತಿಮ್ಮಪ್ಪ, ಮಹಿಬೂಬ್, ಅಂಜಿನೇಯ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

