ದಲಿತರ ಮೇಲೆ ಹಲ್ಲೆ: ಗಡಿಪಾರಿಗೆ ದಸಂಸ ಒತ್ತಾಯ
ರಾಯಚೂರು: ತಾಲೂಕಿನ ಗಾಣದಾಳ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಮಾಡಿ ಮತ್ತು ಕೊಲೆ ಬೆದರಿಕೆ ಹಾಕಿದ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಇತ್ತೀಚೆಗೆ ಗಾಣದಾಳ ಗ್ರಾಮದ ಮಾರೆಮ್ಮ ದೇವಸ್ಥಾನದಲ್ಲಿ ಗ್ರಾಮ ಸಹಾಯಕನ ಆಯ್ಕೆ ಕುರಿತ ಸಭೆಯ ವೀಕ್ಷಣೆಗೆ ತೆರಳಿದ್ದ ಜಯಪಾಲ ಮತ್ತು ಮಾಣಿಕ್ಯಮ್ಮ ಅವರ ಮೇಲೆ ಹಳೆಯ ದ್ವೇಷದಿಂದ ಗ್ರಾಮದ ತಲಾರಿ ಆಂಜಿನೆಯ್ಯ ಮತ್ತು ಅವರ ಸಂಬಂಧಿಗಳು ಸೇರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.
ಈ ಕೃತ್ಯ ಎಸಗಿದವರನ್ನು ಕೂಡಲೇ ಗೂಂಡಾ ಕಾಯಿದೆ ಅಡಿ ಬಂಧಿಸಿ ಗಡಿಪಾರು ಮಾಡಬೇಕು. ದೌರ್ಜನ್ಯ ಎಸಗಿದವರು ಅತ್ಯಾಚಾರ ಮತ್ತು ಕೊಲೆಗೈಯ್ಯುವ ಬೆದರಿಕೆಯೊಡ್ಡಿದ ಹಿನ್ನೆಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಗ್ರಾಮದಲ್ಲಿ ಪುನಾ ಇಂಥ ಘಟನೆಗಳು ಮರುಕಳಿಸದಂತೆ ಇಲಾಖೆಯು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಮಾಣಿಕ್ಯಮ್ಮ ಮತ್ತು ಅವರ ಕುಟುಂಬದವರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಸಂಘಟನೆಯ ಜಿಲ್ಲಾ ಸಂಚಾಲಕ ಎಂ.ಆರ್. ಬೇರಿ, ಹನುಮಂತ ಅರೋಲಿ, ಶರಣಪ್ಪ ದಿನ್ನಿ, ಭೀಮಣ್ಣ ಕೊನಿಂಟಿ, ಎಂ.ಈರಣ್ಣ ಮತ್ತಿತರರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

