ರಾಯಚೂರು

ಸಂಕ್ಷಿಪ್ತ ಸುದ್ದಿ

Published On :

ಅನಧಿಕೃತ ಮದ್ಯ ಮಾರಾಟ: ದೂರು
ಸಿಂಧನೂರು: ತಾಲೂಕಿನ ಹುಡಾ ಗ್ರಾಮದಲ್ಲಿ ಅನಧಿಕೃತವಾದ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಕುಡುಕರ ಹಾವಳಿ ಮೀತಿಮೀರಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಓಣಿಗಳಲ್ಲಿ ಕಿರಾಣಿ ಅಂಗಡಿಯಂತೆ ಮದ್ಯದ ಅಂಗಡಿಗಳನ್ನು ತೆರೆಯಲಾಗಿದೆ. ಕೆಲವರು ಹೋಟೆಲ್, ಕಿರಾಣಿ ಅಂಗಡಿಗಳಲ್ಲಿಯೂ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇನ್ನು ಕೆಲವರು ಮನೆಗಳಲ್ಲಿಟ್ಟುಕೊಂಡು ಮದ್ಯದ ವ್ಯಾಪಾರ ಮಾಡುತ್ತಿದ್ದು, ನಾಗರಿಕರು ಕುಡುಕರ ಹಾವಳಿಗೆ ಬೇಸತ್ತಿದ್ದಾರೆ. ರಹೀಮ್‌ಸಾಬ್ ಎನ್ನುವ ವ್ಯಕ್ತಿಯು ಪೆಟ್ರೋಲ್, ಡೀಸೆಲ್ ಮಾರಾಟದ ಜೊತೆಗೆ ಮದ್ಯ ಮಾರಾಟ ಮಾಡುತ್ತಿರುವುದರಿಂದ ಓಣಿಯಲ್ಲಿ ನಾಗರಿಕರ ಜೀವನಕ್ಕೆ ತುಂಬಾ ತೊಂದರೆಯಾಗಿದೆ. ಅಬಕಾರಿ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಅಕ್ರಮಕ್ಕೆ ಕಡಿವಾಣ ಹಾಕಬೇಕೆಂದು ಗ್ರಾಮಸ್ಥರಾದ ನಾರಾಯಣಪ್ಪ, ಹನುಮಪ್ಪ, ಈರಣ್ಣ ಆಗ್ರಹಿಸಿದ್ದಾರೆ.
ವ್ಯಕ್ತಿ ಆತ್ಮಹತ್ಯೆ
ಮಸ್ಕಿ: ಪಟ್ಟಣದಲ್ಲಿ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ರಮೇಶ್ ಎಂದು ಗುರುತಿಸಲಾಗಿದೆ. ಈತ ಮದ್ಯದ ಅಮಲಿನಲ್ಲಿ ತನ್ನ ಮನೆಯ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.